ಕೊರಟಗೆರೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ 75ನೇ ವರ್ಷದ ಜನ್ಮದಿನದ ಅಮೃತ ಮಹೋತ್ಸವವನ್ನು ಗುರುವಾರ ಕೊರಟಗೆರೆಯಲ್ಲಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸಿದರು.
ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಕೇಕ್ ಕತ್ತರಿಸಿ ಸಿಹಿ ವಿತರಿಸಲಾಯಿತು. ಬಳಿಕ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ವಿತರಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಅಭಿಮಾನಿಗಳು ಸ್ಥಳೀಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ, ಡಾ. ಜಿ. ಪರಮೇಶ್ವರ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿದರು.

ರಕ್ತದಾನ ಶಿಬಿರದಲ್ಲಿ ತುಮಕೂರು ವಿಶೇಷ ಭೂಸ್ವಾಧೀನಾಧಿಕಾರಿ ಸೋಮಪ್ಪ ಕಡಕೋಳ, ತಹಶೀಲ್ದಾರ್ ಕೆ. ಮಂಜುನಾಥ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಿ. ಅನಂತರಾಮು, ಲ್ಯಾಂಡ್ ಆರ್ಮಿ ಎಇಇ ಸಿಂಧು, ಲೋಕೋಪಯೋಗಿ ಇಲಾಖೆ ಎಇಇ ದೀಪಕ್, ಪಿಎಸ್ಐ ತೀರ್ಥೇಶ್, ಎಎಸ್ಐ ಗೋವಿಂದನಾಯ್ಕ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಅಶ್ವತ್ಥನಾರಾಯಣ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಮ್ಮ, ಯುವ ಕಾಂಗ್ರೆಸ್ ಅಧ್ಯಕ್ಷ ಬೈರೇಶ್, ಉಪಾಧ್ಯಕ್ಷ ದೀಪಕ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಮಹಾಲಿಂಗಪ್ಪ, ಮಾಜಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ವೆಂಕಟಪ್ಪ, ಪಟ್ಟಣ ಪಂಚಾಯಿತಿ ಸದಸ್ಯ ಓಬಳರಾಜು, ಮುಖಂಡರಾದ ರಾಜಣ್ಣ, ವಿನಯ್, ಅರವಿಂದ್, ರಘುವೀರ್, ಜಯರಾಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಕೊರಟಗೆರೆ
