ಶ್ಲೋಕ – 27
ಬ್ರಹ್ಮಣೋ ಹಿ ಪ್ರತಿಷ್ಠಾSಹಮಮೃತಸ್ಯಾವ್ಯಯಸ್ಯ ಚ ।
ಶಾಶ್ವತಸ್ಯ ಚ ಧರ್ಮಸ್ಯ ಸುಖಸ್ಯೈಕಾಂತಿಕಸ್ಯ ಚ ॥೨೭॥
ಬ್ರಹ್ಮಣಃ ಹಿ ಪ್ರತಿಷ್ಠಾ ಅಹಮ್ ಅಮೃತಸ್ಯ ಅವ್ಯಯಸ್ಯ ಚ ।
ಶಾಶ್ವತಸ್ಯ ಚ ಧರ್ಮಸ್ಯ ಸುಖಸ್ಯ ಐಕಾಂತಿಕಸ್ಯ ಚ –ಅಳಿವಿರದ ಬದಲಾಗದ ಚಿತ್ ಪ್ರಕೃತಿಗೂ ನಾನೆ ಆಸರೆ-ನೆಲೆ. ಸನಾತನ ಧರ್ಮಕ್ಕೆ ಮತ್ತು ಕೇವಲ ಸುಖಮಯವಾದ ಮೋಕ್ಷಕ್ಕೆ ಕೂಡ.
ಮೂರು ಗುಣಗಳನ್ನು ಮೀರಿ ನಿಂತಾಗ ಜೀವದ ಸಹಜ-ಶಾಶ್ವತ ಧರ್ಮ ಅಭಿವ್ಯಕ್ತವಾಗುತ್ತದೆ. ಈ ಸ್ಥಿತಿಯಲ್ಲಿ ಬ್ರಹ್ಮತತ್ವವಾದ ಚಿತ್ ಪ್ರಕೃತಿ(ಶ್ರೀಲಕ್ಷ್ಮಿ)ಗೂ ಆಸರೆಯಾದ ಆ ಭಗವಂತವಂತನನ್ನು ಮೋಕ್ಷದಲ್ಲಿ ಸೇರಬಹುದು.
ಇತಿ ಚತುರ್ದಶೋSಧ್ಯಾಯಃ
ಹದಿನಾಲ್ಕನೆಯ ಅಧ್ಯಾಯ ಮುಗಿಯಿತು
