ರಾಮನಾಥಪುರ, ಆ.8: ದೊಡ್ಡಮಗ್ಗೆ ಹೋಬಳಿಯ ಮಡಕೆ ಹೊಸಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಚಿವರು ಹಾಗೂ ಶಾಸಕ ಎ. ಮಂಜು ಗುದ್ದಲಿಪೂಜೆ ನೆರವೇರಿಸಿದರು.
ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಗ್ರಾಮಸ್ಥರು, ರೈತರು ಹಾಗೂ ವಾಹನ ಸವಾರರ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೆ, ಮಳೆಗಾಲದಲ್ಲಿ ರಸ್ತೆ ಹದಗೆಡುವ ಸಮಸ್ಯೆಗೂ ಪರಿಹಾರ ದೊರೆಯಲಿದೆ ಎಂದು ಶಾಸಕ ಎ. ಮಂಜು ಹೇಳಿದರು.
ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ತಮ್ಮ ಸರ್ಕಾರದ ಅವಧಿಯಲ್ಲೂ ಹಾಗೂ ಶಾಸಕರಾಗಿ ಮುಂದುವರಿದಿರುವ ಅವಧಿಯಲ್ಲೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳು ಹಾಗೂ ಗ್ರಾಮಸ್ಥರು ಕಾಮಗಾರಿಯ ಗುಣಮಟ್ಟದ ಮೇಲೆ ನಿಗಾ ವಹಿಸಿ, ಗುತ್ತಿಗೆದಾರರಿಂದ ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಿಕೊಳ್ಳಬೇಕು ಎಂದು ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಮಡಕೆ ಹೊಸಹಳ್ಳಿ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
