ಕೊರಟಗೆರೆ:- ತಾಲೂಕಿನ ಮಣುವಿನಕುರಿಕೆ ಗ್ರಾಮದ ಹರಿಜನ ಕಾಲೋನಿಯಲ್ಲಿ ಕೊರಟಗೆರೆ ಪೊಲೀಸ್ ಠಾಣೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆ ನಡೆಯಿತು.
ಸಭೆಯಲ್ಲಿ ಕಾಲೋನಿಯ ಮುಖಂಡರು ಹಾಗೂ ನಿವಾಸಿಗಳು ತಮ್ಮ ವ್ಯಾಪ್ತಿಯಲ್ಲಿರುವ ವಿವಿಧ ಸಮಸ್ಯೆಗಳು ಮತ್ತು ಕುಂದುಕೊರತೆಗಳನ್ನು ಪೊಲೀಸರ ಗಮನಕ್ಕೆ ತಂದರು. ದೂರುಗಳನ್ನು ಆಲಿಸಿದ ಕೊರಟಗೆರೆ ಪೊಲೀಸ್ ಠಾಣೆಯ ಪಿಎಸ್ಐ ತೀರ್ಥೇಶ್ ಅವರು, ಸಮಸ್ಯೆಗಳ ಸ್ವರೂಪದ ಕುರಿತು ಮಾಹಿತಿ ಪಡೆದು, ಕಾನೂನು ವ್ಯಾಪ್ತಿಯಲ್ಲಿ ಸಾಧ್ಯವಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಜತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಇಂತಹ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
ಸಭೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಮುಖಂಡರುಗಳಾದ ಪೊಲೀಸ್ ವೆಂಕಟೇಶ್, ದೊಡ್ಡಯ್ಯ, ವಿಭೂತಿ ಸಿದ್ದಪ್ಪ, ಸಿದ್ದರಾಜು, ರವಿಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಕೊರಟಗೆರೆ.
