ತುಮಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುಮಕೂರು ತಾಲೂಕಿನ ಬನಶಂಕರಿ ಬಿ ಕಾರ್ಯಕ್ಷೇತ್ರದ ಬನಶಂಕರಿ ಅಮ್ಮನ ದೇವಸ್ಥಾನದ ಧಾರ್ಮಿಕ ಸ್ವಚ್ಛತಾ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣರವರು ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ತಾಲ್ಲೋಕು ಯೋಜನಾಧಿಕಾರಿಗಳು ಜಿಲ್ಲಾ ಕಛೇರಿಯ ಸಿಬ್ಬಂದಿಗಳು ತಾಲೂಕು ಕಚೇರಿಯ ಸಿಬ್ಬಂದಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ವಲಯ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ನಗರದ ಕುಣಿಗಲ್ ರಸ್ತೆಯ ಬನಶಂಕರಿ ವೃತ್ತದಲ್ಲಿರುವ ಬನಶಂಕರಿ ಅಮ್ಮನ ದೇವಸ್ಥಾನ ಸ್ವಚ್ಛತೆ ಮಾಡಿ ಬನಶಂಕರಿ ಅಮ್ಮನವರಿಗೆ ಪೂಜೆ ಸಲ್ಲಿಸಿದರು.

ಕರ್ನಾಟಕ ರಾಜ್ಯದಲ್ಲಿರುವ ಎಲ್ಲ ದೇವಸ್ಥಾನದಲ್ಲಿ ಸ್ವತಂತ್ರ ದಿನಾಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದಿನಾಂಕ 10-08-2026 ರಿಂದ 14-08-2026 ರ ತನಕ ನಡೆಯಲಿರುವ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದ್ದು ಎಲ್ಲರೂ ದೇವಾಲಯಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು,ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಸತೀಶ್ ಸುವರ್ಣರವರು ತಿಳಿಸಿದರು.
– ಕೆ.ಬಿ.ಚಂದ್ರಚೂಡ
