ಕೆ.ಆರ್.ಪೇಟೆ,ಆ.12: ನಾಡಿನ ಸರ್ವ ಜನತೆಗೆ ಸಾಮಾಜಿಕ ನ್ಯಾಯದ ಹರಿಹಾರ ನುಡಿದಂತೆ ನಡೆದ ಮಾದರಿ ರಾಜಕಾರಣಿ, ಬಡವರಿಗೆ ಹಲವು ಭಾಗ್ಯ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ 79ನೇ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ತಾಲ್ಲೂಕು ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಹಾಗೂ ತಾಲ್ಲೂಕು ಕುರುಬರ ಸಂಘದ ವತಿಯಿಂದ ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಎಲ್ಲಾ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ತಾಲ್ಲೂಕು ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ದೇವರಾಜು, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಕೆಯುಐಡಿಎಫ್ಸಿ ನಿಗಮದ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಮನ್ಮುಲ್ ನಿರ್ದೇಶಕ ಎಂ.ಬಿ.ಹರೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಪುರುಷೋತ್ತಮ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಎನ್.ದಿವಾಕರ್, ಸಣ್ಣನಿಂಗೇಗೌಡ, ಸಾಸಲು ಈರಪ್ಪ, ಮಡುವಿನಕೋಡಿ ಕಾಂತರಾಜು, ಅಗ್ರಹಾರ ಕೆ.ಎಸ್.ಕುಮಾರ್ ಮತ್ತಿತರರ ನೇತೃತ್ವದಲ್ಲಿ ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ಸರ್ಕಾರಿ ದೊಡ್ಡಾಸ್ಪತ್ರೆಯ ಎಲ್ಲಾ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದಲ್ಲಿ ರೋಗಿಗಳಿಗೆ ಬೇಗ ಗುಣಮುಖರಾಗುವಂತೆ ಹಾರೈಸಿದರು.
ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಸಿದ್ದರಾಮಯ್ಯ ಅವರು 8ವರ್ಷಕ್ಕೂ ಹೆಚ್ಚು ಸುಧೀರ್ಘ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ದಾಖಲೆ ಬರೆದು, ಇಡೀ ದೇಶದಲ್ಲಿಯೇ ಮಾದರಿ ಆಡಳಿತ ನೀಡಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಹಿಂದೆ-ಮುಂದೆ ನೋಡುವ ಈ ಸಂದರ್ಭದಲ್ಲಿ ಒಂದು ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಹೈಕಮಾಂಡ್ ಹೇಳಿದ ಕೂಡಲೇ ರಾಜೀನಾಮೆ ನೀಡಿ ತಮ್ಮ ತ್ಯಾಗದ ಗುಣವನ್ನು ಎತ್ತಿ ಹಿಡಿದಿದ್ದಾರೆ. ಸಿದ್ದರಾಮಯ್ಯ ಸಾಹೇಬರ ಈ ಗುಣ ಎಲ್ಲಾ ರಾಜಕಾರಣಿಗಳಿಗೂ ಆದರ್ಶವಾಗಿದೆ ಇಂತಹ ಅಪರೂಪದ ಗುಣ ಹೊಂದಿರುವ ನಮ್ಮ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಹಾಗೂ ದಯಮಯನಾದ ದೇವರು ಇನ್ನೂ ಹೆಚ್ಚಿನ ಆರೋಗ್ಯ, ಆಯಸ್ಸು ನೀಡುವ ಮತ್ತಷ್ಟು ಜನಸೇವೆ ಮಾಡುವ ಶಕ್ತಿ ನೀಡಲಿ ಎಂದು ಬಿ.ನಾಗೇಂದ್ರಕುಮಾರ್ ಹಾರೈಸಿದರು.

ತಾಲ್ಲೂಕು ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ದೇವರಾಜು ಅವರು ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡು ಮಾತನಾಡಿ ಇಡೀ ದೇಶದಲ್ಲಿ 2013ರಿಂದ 2018ರವರೆಗೆ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅನ್ನಭಾಗ್ಯ ಯೋಜನೆ ಸೇರಿದಂತೆ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ 165 ಭರವಸೆಗಳನ್ನು ಈಡೇರಿದ್ದರು. ಜೊತೆಗೆ ಪ್ರತಿಯೊಬ್ಬ ರೈತರ ತಲಾ 50ಸಾವಿ ರೂ ಮನ್ನಾ ಮಾಡಿದ್ದರು. ಅಂಬೇಡ್ಕರ್ ಅಭಿವೃದ್ದಿ ನಿಗಮದಲ್ಲಿ ದಲಿತ ಬಂಧುಗಳ ಸಾಲವನ್ನು ಸಂಪೂರ್ಣ ಮನ್ನಾ ಮಾಡಿದ್ದರು. ನಂತರ ಎರಡನೇ ಭಾರಿಗೆ 2023ರಿಂದ 2026ವರೆಗೆ ಈಗ 3ವರ್ಷಗಳ ಮುಖ್ಯಮಂತ್ರಿಯಾಗಿ ಸರ್ವ ಜನರ ಅಭಿವೃದ್ಧಿಗಾಗಿ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಜನಸಾಮಾನ್ಯರ ಆರ್ಥಿಕ ಅಭಿವೃದ್ದಿಗೆ ಕಾರಣರಾಗಿದ್ದಾರೆ.
3ವರ್ಷಗಳ ಕಾಲ ಉತ್ತಮ ಆಡಳಿತ ನಡೆಸಿ ಕಾಂಗ್ರೆಸ್ ಹೈಕಮಾಂಡ್ ಹೇಳಿದ ಕೂಡಲೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿ ಮೂಲಕ ನುಡಿದಂತೆ ನಡೆದ ಮುಖ್ಯಮಂತ್ರಿ ಎಂಬ ಖ್ಯಾತಿಗೆ ಭಾಜನವಾಗಿದ್ದಾರೆ ಎಂದು ಕೋಡಿಮಾರನಹಳ್ಳಿ ದೇವರಾಜು ಹೆಮ್ಮೆಯಿಂದ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಎನ್.ದಿವಾಕರ್, ತಾ .ಪಂ.ಮಾಜಿ ಸದಸ್ಯರಾದ ಸಣ್ಣನಿಂಗೇಗೌಡ, ಸಾಸಲು ಈರಪ್ಪ, ಮಡುವಿನಕೋಡಿ ಕಾಂತರಾಜು, ಅಗ್ರಹಾರ ಕೆ.ಎಸ್.ಕುಮಾರ್, ಕೆ.ಕೆ.ರಮೇಶ್, ಕೆ.ಆರ್.ರವೀಂದ್ರಬಾಬು, ಮಹೇಶ್, ಎಲ್.ಐ.ಸಿ.ರವಿ, ಸಯ್ಯದ್ ಜಮೀಲ್, ಇಲ್ಯಾಸ್ ಪಾಷಾ, ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
*ಅನಾಥಾಶ್ರಮದಲ್ಲಿ ಅನ್ನಧಾನ*: ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಅಂಗವಾಗಿ ಹೊರವಲಯದ ಚಿಕ್ಕೋನಹಳ್ಳಿ ಬಳಿ ಇರುವ ಮಾತೃಭೂಮಿ ಅನಾಥಾಶ್ರಮದಲ್ಲಿ ಅನಾಥರು ಹಾಗೂ ವಯೋ ವೃದ್ದರಿಗೆ ಅನ್ನಧಾನ ಹಾಗೂ ಹಣ್ಣು-ಹಂಪಲು ವಿತರಣೆ ಮಾಡುವ ಮೂಲಕ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದರು.
– ಶ್ರೀನಿವಾಸ್ ಆರ್.
