ಹಾಸನ, ಆ.15: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜ್ಞಾನ ದೀಕ್ಷಾ ಪ್ಯಾರಾ ಮೆಡಿಕಲ್ ಕಾಲೇಜು, ಹಾಸನಾಂಬ ಲಯನ್ಸ್ ಹಾಸನ ಹಾಗೂ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರೋ. ಕೆ.ಎಸ್. ಯೋಗೇಶ್ ಹಾಗೂ ಹಾಸನಾಂಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಕೆ. ಮೋಹನ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮತ್ತು ಬಲಿದಾನ ಮಾಡಿದ ಮಹನೀಯರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ಅರಿತು ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಉಪಾಧ್ಯಕ್ಷ ರೋ. ಯು.ಎಂ. ಭೂದೇಶ್, ಸದಸ್ಯರಾದ ರೋ. ಪುಷ್ಪ, ರೋ. ಶೈಲಾ, ರೋ. ಚಂದ್ರೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
