ರಾಮನಾಥಪುರ, ಆ.17: ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ದೊರೆತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ಹೇಳಿದರು.
ರಾಮನಾಥಪುರ ಹೋಬಳಿಯ ಹನ್ಯಾಳು ಗ್ರಾಮದ ದಿ. ಗೌರಮ್ಮ ಪುಟ್ಟಸ್ವಾಮಪ್ಪ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು. ಅವರ ಆದರ್ಶ, ದೇಶಪ್ರೇಮ ಹಾಗೂ ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸತ್ಪ್ರಜೆಗಳಾಗಿ ಬೆಳೆದು ಸದೃಢ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಎ. ಮಂಜು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ರವಿಕುಮಾರ್, ಎಸ್ಡಿಎಂಸಿ ಅಧ್ಯಕ್ಷ ಲೋಕೇಶ್, ಸದಸ್ಯರಾದ ಜಯರಾಮ್, ಚಂದ್ರಶೇಖರ್, ಸವಿತಾ, ಚೈತ್ರಾ, ರಖೀಬಾನು, ನಿವೃತ್ತ ಶಿಕ್ಷಕ ಲಕ್ಕೇಗೌಡ, ಶಿಕ್ಷಕರಾದ ಸುಬ್ಬಲಕ್ಷ್ಮಿ, ಗೀತಾ, ಕುಮಾರ್, ಮೇಘನಾ, ಸ್ವಾತಿ, ಫೈರೋಜಾ, ಪೋಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಕುಮಾರಸ್ವಾಮಿ ಎಂ.ಎನ್.
