ತುಮಕೂರು- ನಗರದ ಟೌನ್ಹಾಲ್ ಅಂಬೇಡ್ಕರ್ ಪ್ರತಿಮೆ ಮುಂಭಾಗ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಬಿ. ನಾಗೇಶ್ ರವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಜಿಲ್ಲಾ ಬಿಜೆಪಿ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಪಡೆದು ಅಂತಿಮ ನಮನ ಸಲ್ಲಿಸಿದರು.
ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷ ಡಾ. ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಚ್.ಎಸ್. ರವಿಶಂಕರ್ ಹೆಬ್ಬಾಕ, ಮಾಜಿ ಶಾಸಕರಾದ ಮಸಾಲೆಜಯರಾಮ್, ಡಾ.ಎಸ್.ರಫೀಕ್ಅಹಮದ್, ಹೆಚ್. ನಿಂಗಪ್ಪ, ಎಂ.ಡಿ.ಲಕ್ಶ್ಮೀನಾರಾಯಣ್, ಡಾ.ಎಂ.ಆರ್.ಹುಲಿನಾಯ್ಕರ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಅಂಬಿಕಾಹುಲಿನಾಯ್ಕರ್, ಪ್ರದೀಪ್ಕುಮಾರ್, ಬ್ಯಾಟರಂಗೇಗೌಡ, ಹನುಮಂತರಾಜು, ನಾಗರತ್ನಮ್ಮ, ಸೊಗಡುಶಿವಣ್ಣ, ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಬ್ರಾಹ್ಮಣ ಸಭಾ ಅಧ್ಯಕ್ಷ ಹೆಚ್.ಎನ್. ಚಂದ್ರಶೇಖರ್, ರುದ್ರೇಶ್, ಹರೀಶ್ ವಶಿಷ್ಠ, ಮಲ್ಲಿಕಾರ್ಜುನ್, ಸಿ.ಎನ್. ಮಂಜುನಾಥ್, ವೇದಮೂರ್ತಿ, ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು ಬಿ.ಸಿ. ನಾಗೇಶ್ ರವರ ಪಾರ್ಥೀವ ಶರೀರಕ್ಕೆ ಪುಷ್ಪಗುಚ್ಚವಿಟ್ಟು ಅಂತಿಮ ದರ್ಶನ ಪಡೆದರು.
ಹಿರಿಯ ನಾಯಕ ಬಿ.ಸಿ. ನಾಗೇಶ್ ರವರ ನಿಧನದಿಂದ ಬಿಜೆಪಿ ಪಕ್ಷಕ್ಕೆ ಅಪಾರ ನಷ್ಟವುಂಟಾಗಿದೆ. ಇವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಚ್.ಎಸ್. ರವಿಶಂಕರ್ ಹೆಬ್ಬಾಕ ಮಾತನಾಡಿ, ಮಾಜಿ ಮಂತ್ರಿ ಬಿ.ಸಿ. ನಾಗೇಶ್ ಅವರು ವಿಧಿವಶರಾಗಿರುವುದು ನಮಗೆಲ್ಲಾ ತುಂಬಾ ನೋವು ತಂದಿದೆ. ತುಮಕೂರು ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.ತಿಪಟೂರಿನಲ್ಲಿ ಗುರುವಾರ ಬಿ.ಸಿ. ನಾಗೇಶ್ ರವರ ಅಂತ್ಯಕ್ರಿಯೆ ನೆರವೇರಲಿದೆ ಎಂದ ಅವರು, ಮಾಜಿ ಸಚಿವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
ಸರಳ ವ್ಯಕ್ತಿತ್ವದ, ಸಂಘ ಪರಿವಾರದಿಂದ ಬೆಳೆದು ಬಂದ ನಾಯಕ ಬಿ.ಸಿ. ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದಾಗ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು.
– ಚಂದ್ರಚೂಡ ಕೆ.ಬಿ
