ಆಲೂರು: ಹಾಸನ ಜಿಲ್ಲೆಯ ಆಲೂರು ಪಟ್ಟಣದ ಹೌಸಿಂಗ್ ಬೋರ್ಡ್ನಲ್ಲಿ ತಾಯಿ ತನ್ನ ಎರಡು ವರ್ಷದ ಗಂಡು ಮಗುವನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
ಅನುಪಮ (ಅನು), 27, ಆತ್ಮಹತ್ಯೆಗೆ ಶರಣಾದ ತಾಯಿ. ಆರ್ಯನ್ (2) ತಾಯಿಯಿಂದಲೇ ಕೊಲೆಯಾದ ಕಂದಮ್ಮ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
