Oplus_16908288
ಹಾಸನ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಸಂಬಂಧ ಲೋಕಾಯುಕ್ತ ತನಿಖೆಗೆ ನ್ಯಾಯಾಲಯ ಆದೇಶಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ, “ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ತನಿಖೆಗೆ ಅಧಿಕಾರಿಗಳು ಕೇಳುವ ಎಲ್ಲ ಮಾಹಿತಿಯನ್ನು ನೀಡಿ ಸಂಪೂರ್ಣ ಸಹಕಾರ ನೀಡುತ್ತೇನೆ” ಎಂದರು.
ಗ್ರಾಮ ಪಂಚಾಯಿತಿ ಮೀಸಲಾತಿ ಪಟ್ಟಿಗೆ ಸಂಬಂಧಿಸಿದ ಆರೋಪದ ಕುರಿತು, ಲೋಪದೋಷಗಳಿದ್ದರೆ ನ್ಯಾಯಾಲಯದ ಮೊರೆ ಹೋಗಲು ಅವಕಾಶವಿದೆ. ನಾನು ಜೆಡಿಎಸ್ ವಕ್ತಾರನಾಗಲು ತಯಾರಿಲ್ಲ ಎಂದು ಟಾಂಗ್ ನೀಡಿದರು.
ಹಾಸನ ನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ ವಿಳಂಬದ ಕುರಿತು, “ನನಗೆ ಅವಕಾಶ ಸಿಕ್ಕಾಗ ಅತಿ ವೇಗವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತೇನೆ. ಜನರು ನನ್ನ ಮೇಲೆ ವಿಶ್ವಾಸ ಹೊಂದಿದ್ದಾರೆ” ಎಂದು ಪ್ರೀತಂಗೌಡ ಹೇಳಿದರು.
