ತುಮಕೂರು :ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತುಮಕೂರು ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಸಿ.ಟಿ.ಕೆರೆ ವಲಯದ ಬಿಟ್ಟನಕುರಿಕೆ ಗ್ರಾಮದಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಪುನಶ್ಚೇತನಗೊಳಿಸಲಾದ ಬಿಟ್ಟನಕುರಿಕೆ ಕೆರೆ ಅಂಗಗಳದಲ್ಲಿ ಮುಂಗಾರು ಮಳೆ ಭರಾಟೆ ಜೋರಾಗಿದ್ದು ಈ ಸಂದರ್ಭದಲ್ಲಿ ಕೆರೆಯ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ರವರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಂಜಣ್ಣ, ತಾಲ್ಲೂಕು ಯೋಜನಾಧಿಕಾರಿ ಸಂದೇಶ್.ಪಿ.ಬಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಕುಸ್ತರ್ ಉನ್ನಿಸ. ಕೆರೆ ಸಮಿತಿ ಅಧ್ಯಕ್ಷರಾದ ನಾರಾಯಣಪ್ಪ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ವಿಜಯ್ ಕುಮಾರ್, ಗ್ರಾಮದ ಮುಖಂಡರಾದ ಶಿವಣ್ಣ, ಗೋವಿಂದಪ್ಪ ಕೆರೆ ಸಮಿತಿ ಪದಾಧಿಕಾರಿಗಳು, ಕೃಷಿ ಮೇಲ್ವಿಚಾರಕ ರಾಘವೇಂದ್ರ.ಎನ್, ಸೇವಾಪ್ರತಿನಿಧಿ ಶ್ರೀಮತಿಮಂಜಮ್ಮ, ಊರಿನ ಮುಖಂಡರು ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
ವರದಿ : ಕೆ ಬಿ ಚಂದ್ರಚೂಡ್
