ಕಠ್ಮಂಡು, ಆ. 26: ನೇಪಾಳದಲ್ಲಿ (Nepal)ಭಾರಿ ಪ್ರವಾಹ ಉಂಟಾದ ಪರಿಣಾಮ ಎಂಟು ಜನರು ಮೃತಪಟ್ಟು, 105 ಮಂದಿ ಭಾರತೀಯರು ಸೇರಿ ಹಲವರು ನಾಪತ್ತೆಯಾಗಿದ್ದಾರೆ. ಭೋಟೆ ಕೋಶಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹವು ನೇಪಾಳದ ನುವಾಕೋಟ್ ಮತ್ತು ಧಾಡಿಂಗ್ ಜಿಲ್ಲೆಗಳನ್ನು ಆವರಿಸಿದೆ (Nepal Flood).
ಟಿಬೆಟ್ನಲ್ಲಿ ಉಂಟಾದ ಪ್ರವಾಹದಿಂದಾಗಿ ನೇಪಾಳದ ಹಲವು ಗ್ರಾಮಗಳು ಕೊಚ್ಚಿ ಹೋಗಿವೆ. ಇದುವರೆಗೆ ನುವಾಕೋಟ್ ಮತ್ತು ಧಾಡಿಂಗ್ ಜಿಲ್ಲೆಗಳಲ್ಲಿ ಎಂಟು ಮೃತದೇಹಗಳು ಪತ್ತೆಯಾಗಿವೆ.
291 ವಿದೇಶಿಯರು ಮತ್ತು 93 ನೇಪಾಳಿ ಪ್ರಜೆಗಳು ಸೇರಿ ಕನಿಷ್ಠ 384 ಪ್ರಯಾಣಿಕರು ಪ್ರವಾಹ ಪೀಡಿತ ಪ್ರದೇಶದಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ವಿದೇಶಿಯರಲ್ಲಿ 105 ಮಂದಿ ಭಾರತೀಯರು ಎಂದು ನೇಪಾಳ ಪ್ರವಾಸೋದ್ಯಮ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ರಸುವಾ ಜಿಲ್ಲೆಯಲ್ಲಿ ಕನಿಷ್ಠ 26 ನೇಪಾಳ ಪೊಲೀಸ್ ಸಿಬ್ಬಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಶಸ್ತ್ರ ಪೊಲೀಸ್ ಪಡೆ ಕೂಡ ತನ್ನ ಏಳು ಸಿಬ್ಬಂದಿ ಕಾಣೆಯಾಗಿದ್ದಾರೆ ಎಂದು ತಿಳಿಸಿದೆ. ನೇಪಾಳ ಸೇನೆಯು ಹೆಲಿಕಾಪ್ಟರ್ಗಳು ಮತ್ತು ವಿಪತ್ತು ನಿರ್ವಹಣಾ ಸಿಬ್ಬಂದಿಯನ್ನು ಪೀಡಿತ ಪ್ರದೇಶದಲ್ಲಿ ನಿಯೋಜಿಸಿದೆ. ಹಾನಿಯ ವಿವರಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.
