ಕೆ.ಆರ್.ಪೇಟೆ: ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರು ಮತ್ತು ವರದಿಗಾರರ ಸಂಘದ ಕೆ.ಆರ್.ಪೇಟೆ ತಾಲ್ಲೂಕು ನೂತನ ಅಧ್ಯಕ್ಷರಾಗಿ ಗಂಜಿಗೆರೆ ಮಹೇಶ್ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ, ಕೆ.ಆರ್.ಪೇಟೆ ಪಟ್ಟಣದ ಶ್ರೀ ಮಲ್ಲಿಕಾರ್ಜುನ್ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ಸರ್ಕಾರಿ ಎಸ್.ಸಿ, ಎಸ್.ಟಿ ನೌಕರರ ಸಂಘದಿಂದ ನೂತನ ಅಧ್ಯಕ್ಷರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಕೆ.ಆರ್.ಪೇಟೆ ತಾಲ್ಲೂಕು ಎಸ್.ಸಿ, ಎಸ್.ಟಿ ಶಿಕ್ಷಕರ ಸಂಘದ ಅಧ್ಯಕ್ಷ ಭೈರಯ್ಯ ಅವರು, ಗಂಜಿಗೆರೆ ಮಹೇಶ್ ಅವರು ಪತ್ರಿಕಾ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಹಿಂದುಳಿದ ವರ್ಗಗಳ, ದಲಿತರ ಹಾಗೂ ಶೋಷಿತರ ಧ್ವನಿಯಾಗಿ ನಿರಂತರವಾಗಿ ಕೆಲಸ ಮಾಡಿದ್ದಾರೆ. ಇವರಂತಹ ನಿಷ್ಠಾವಂತ ಪತ್ರಕರ್ತರಿಗೆ ತಾಲ್ಲೂಕು ಅಧ್ಯಕ್ಷ ಸ್ಥಾನ ಸಿಕ್ಕಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಇವರ ನಾಯಕತ್ವದಲ್ಲಿ ಸಂಘ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿ, ಸಾಮಾಜಿಕ ನ್ಯಾಯದ ಪರವಾಗಿ ಇನ್ನೂ ಹೆಚ್ಚಿನ ಕೆಲಸ ಮಾಡಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷ ಚಲುವರಾಜು,ಉಪಾಧ್ಯಕ್ಷರಾದ ಜಯರಾಮು, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಸಂಘಟನೆ ಕಾರ್ಯದರ್ಶಿ ನಾಗಯ್ಯ,ಸಹ ಕಾರ್ಯದರ್ಶಿ ಭಾರತಿ ಅಣ್ಣಯ್ಯ, ಸಹ ಕಾರ್ಯದರ್ಶಿ ಸದಾಶಿವಯ್ಯ, ಖಜಾಂಚಿ ಲಕ್ಷ್ಮಣ್,ಪದಾಧಿಕಾರಿಗಳಾದ ಕೃಷ್ಣಯ್ಯ, ನಟೇಶ್, ಮಹೇಶ್, ಕಿಕ್ಕೇರಿ ಮಹೇಶ್, ಯೋಗೇಶ್, ನಾಗೇಶ್, ಕೀರ್ತಿ ಕುಮಾರ್,ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ, ಕೆ.ಆರ್.ಪೇಟೆ
