ತುಮಕೂರು: ನಗರದ ಶೆಟ್ಟಿಹಳ್ಳಿ ಗೇಟ್ ಬಳಿಯ ರಾಘವೇಂದ್ರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 355 ನೇ ಆರಾಧನಾ ಮಹೋತ್ಸವದ ಅಂಗವಾಗಿ ರಾಯರ ಬೃಂದಾವನಕ್ಕೆ ವಿಶೇಷ ಅಭಿಷೇಕ, ಪೂಜಾದಿಗಳನ್ನು ನೆರವೇರಿಸಲಾಯಿತು.
ಬೃಂದಾವನಕ್ಕೆ ವಿಶೇಷ ಹೂವಿನ ಹಾಗೂ ರಜತ ಕವಚದ ಅಲಂಕಾರ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಬೆಳ್ಳಿಯ ರಥೋತ್ಸವ ನಡೆಯಿತು. ನಗರದ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ರಾಯರ ದರ್ಶನ ಪಡೆದು ತೀರ್ಥ ಪ್ರಸಾದ ಪಡೆದು ಧನ್ಯರಾದರು,ಉತ್ತರಾಧನೆ ನಿಮಿತ್ತ ರಾಯರ ರಥೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಮಠದ ವ್ಯವಸ್ಥಾಪಕರಾದ ಪುಟ್ಟಣ್ಣ,ರವಿ,ಸನತ್,ಸುಧೀಂದ್ರ,ರಾಜಾರಾಮ್ ಹಾಗೂ ಅಧ್ಯಕ್ಷರು,ಪದಾಧಿಕಾರಿಗಳು ಉಪಸ್ಥಿತರಿದ್ದರು.
– ಚಂದ್ರಚೂಡ ಕೆ.ಬಿ.
