ತುಮಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ವತಿಯಿಂದ ತುಮಕೂರು ತಾಲ್ಲೋಕು ಕೆಸರುಮಡು ಗ್ರಾಮದ ತಿಗಳರ ಸಮುದಾಯ ಭವನದಲ್ಲಿ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವು ಪರಮಪೂಜ್ಯ ಡಾ||ಡಿ.ವೀರೇಂದ್ರಹೆಗ್ಗಡೆ ಹಾಗೂ ಹೇಮಾವತಿ.ವಿ.ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶ್ರೀದೇವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಆಸ್ಪತ್ರೆ ಸಿರಾ ರಸ್ತೆ ಲಿಂಗಾಪುರ ತುಮಕೂರು ಇವರ ಸಹಯೋಗದೊಂದಿಗೆ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕಿನ ಯೋಜನಾಧಿಕಾರಿಗಳಾದ ಪ್ರಭಾಕರ್ನಾಯಕ್, ಕೆಸರಮಡು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಗಂಗಾಧರ್ ಹಾಗೂ ಶ್ರೀದೇವಿ ಆಸ್ಪತ್ರೆಯ ವೈದ್ಯರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಯೋಜನಾಧಿಕಾರಿಗಳು ಪ್ರಾಸ್ತಾವಿಕವಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಯೋಜನೆ ಕಾರ್ಯಕ್ರಮಗಳ ಬಗ್ಗೆ ಹಾಗೂ ಡಾ||ಡಿ.ವೀರೇಂದ್ರಹೆಗ್ಗಡೆ ಮತ್ತು ಹೇಮಾವತಿ.ವಿ.ಹೆಗ್ಗಡೆಯವರ ಆಶಯಗಳ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿ ವೈದ್ಯಕೀಯ ತಪಾಸಣಾ ಶಿಬಿರದ ಸೌಲಭ್ಯ ಪಡೆದುಕೊಂಡು ಉತ್ತಮ ಜೀವನಶೈಲಿ ರೂಢಿಸಿಕೊಂಡು ನಮ್ಮ ಆರೋಗ್ಯವನ್ನು ನಾವೇ ಕಾಪಾಡಿಕೊಳ್ಳಬೇಕು ಎಂದು ತಿಳಿಸಿ ಶುಭ ಹಾರೈಸಿದರು.
ಗಂಗಾಧರ್ ರವರು ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಡಾ||ಡಿ.ವೀರೇಂದ್ರಹೆಗ್ಗಡೆ ರವರ ಹತ್ತು ಹಲವಾರು ಕಾರ್ಯಕ್ರಮಗಳ ಬಗ್ಗೆ ವೇದಿಕೆಯಲ್ಲಿ ಶ್ಲಾಘನೆ ಮಾಡಿದರು, ಶ್ರೀದೇವಿ ಆಸ್ಪತ್ರೆಯ ಆರೋಗ್ಯ ತಪಾಸಣಾ ಶಿಬಿರದ ಸಮನ್ವಯಾಧಿಕಾರಿಯಾದ ಕಿರಣ್ ಕುಮಾರ್ ರವರು ಆಸ್ಪತ್ರೆಯಲ್ಲಿ ಸಿಗುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಕ್ಯಾಂಪ್ ನಿಂದ ಬರುವ ಫಲಾನುಭವಿಗಳಿಗೆ ಆಸ್ಪತ್ರೆಯಲ್ಲಿ ಸಿಗುವ ರಿಯಾಯಿತಿಗಳ ಬಗ್ಗೆ ಮಾಹಿತಿ ನೀಡಿದರು ಈ ಶಿಬಿರದಲ್ಲಿ ಶ್ರೀದೇವಿ ಆಸ್ಪತ್ರೆಯ ನುರಿತ ವೈದ್ಯರಿಂದ ಇಸಿಜಿ,ಬಿಪಿ,ಶುಗರ್ ಮಕ್ಕಳ ಚಿಕಿತ್ಸೆ ಕೀಲು ಮತ್ತು ಮೂಳೆ ಸಾಮಾನ್ಯ ಆರೋಗ್ಯ ಕಣ್ಣು ಕಿವಿ ಗಂಟಲು ಚರ್ಮರೋಗ ಸ್ತ್ರೀ ರೋಗಗಳ ಬಗ್ಗೆ ತಪಾಸಣೆ ಮಾಡಲಾಯಿತು.
ಸುಮಾರು 150ಕ್ಕೂ ಅಧಿಕ ಜನಸಾಮಾನ್ಯರು ಸದುಪಯೋಗ ಪಡಿಸಿಕೊಂಡರು ಈ ಸಂದರ್ಭದಲ್ಲಿ ಶ್ರೀದೇವಿ ವೈದ್ಯಕೀಯ ಸಂಸ್ಥೆಯ ವೈದ್ಯರು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿರೇಖಾ, ವಲಯದ ಮೇಲ್ವಿಚಾರಕರಾದ ಮಹಾಂತೇಶ್, ಆಂತರಿಕ ಲೆಕ್ಕ ಪರಿಶೋಧಕರಾದ ಸೋಮಶೆಟ್ಟಿ, ಸೇವಾ ಪ್ರತಿನಿಧಿಗಳಾದ ಶ್ರೀಮತಿ ಕಲಾವತಿ ಶ್ರೀಮತಿ ರಮ್ಯಾ ಶ್ರೀಮತಿ ಶೋಭಾ ಹಾಗೂ ಆಸ್ಪತ್ರೆಯ ನರ್ಸಿಂಗ್ ತಂಡದವರು ಫಾರ್ಮಸಿ ಹಾಗೂ ಸಂಘದ ಸದಸ್ಯರು ಸ್ಥಳೀಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
– ಚಂದ್ರಚೂಡ ಕೆ,ಬಿ.
