ರಾಮನಾಥಪುರ: ಇಲ್ಲಿನ ಪ್ರಸನ್ನ ಶ್ರೀ ಸುಬ್ರಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 5ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ರಾಮನಾಥಪುರದ ಕಾವ್ಯಾಂಜಲಿ ಕನ್ವೆನ್ಷನ್ ಹಾಲ್ನಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಕೆ. ವೇಣುಗೋಪಾಲ್ ತಿಳಿಸಿದ್ದಾರೆ.
ಹಾಸನ ಡಿಸಿಸಿ ಬ್ಯಾಂಕ್ನ ಆರ್ಥಿಕ ಸಹಕಾರದೊಂದಿಗೆ ನಡೆಯಲಿರುವ ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಂ.ಈ. ತಿಮ್ಮೇಗೌಡ ವಹಿಸಲಿದ್ದಾರೆ. ಕ್ಷೇತ್ರದ ಶಾಸಕ ಎ. ಮಂಜು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಹಾಸನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ನಿರ್ದೇಶಕ ಹಾಗೂ ಹಾಸನ ಹಾಲು ಒಕ್ಕೂಟದ ನಿರ್ದೇಶಕ ಕೆ. ಸತೀಶ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಘದ ಉಪಾಧ್ಯಕ್ಷ ಎಂ.ಆರ್. ಸತೀಶ್, ನಿರ್ದೇಶಕರಾದ ಜಿ.ಎಸ್. ಯೋಗೇಗೌಡ, ಸಿ. ಮಧುಕರ, ಎಚ್.ವಿ. ನಾರಾಯಣ, ಎಂ.ಎಚ್. ಚಿಕ್ಕೇಗೌಡ, ಎಸ್.ಕೆ. ಮಧು, ಜಯಂತಿ, ವಿಜಯಲಕ್ಷ್ಮಿ, ಗಣೇಶ್, ವೆಂಕಟೇಶ್, ಎಂ.ಬಿ. ದೇವರಾಜ್, ಮೇಲ್ವಿಚಾರಕ ಎಂ.ಎಸ್. ಬಸವರಾಜು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿ ಭಾಗವಹಿಸಲಿದ್ದಾರೆ.
ಸಂಘದ ಸರ್ವ ಸದಸ್ಯರು ಸಮಯಕ್ಕೆ ಸರಿಯಾಗಿ ಸಭೆಗೆ ಹಾಜರಾಗಿ, ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಕೆ. ವೇಣುಗೋಪಾಲ್ ಮನವಿ ಮಾಡಿದ್ದಾರೆ.
ವರದಿ : ಕುಮಾರಸ್ವಾಮಿ, ರಾಮನಾಥಪುರ
