ಹಾಸನ: ಹಾಸನದಲ್ಲಿ ಡಿಸೆಂಬರ್ 2ರಂದು ಬಾಳೆಹೊನ್ನೂರು ಜಗದ್ಗುರುಗಳ ಧಾರ್ಮಿಕ ಸಮಾರಂಭ ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಹಾಸನ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್ ತಿಳಿಸಿದ್ದಾರೆ.

ಸೆಪ್ಟೆಂಬರ್ 3ರಂದು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಮಠದಲ್ಲಿ ನಡೆದ ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಬಾಳೆಹೊನ್ನೂರು ರಂಭಾಪುರಿ ಮಠದ ಮಠಾಧೀಶರಾದ ಪರಮಪೂಜ್ಯ ಶ್ರೀ ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಯವರಿಂದ ಆಶೀರ್ವಚನ ಪಡೆದ ಬಳಿಕ, ಹಾಸನದಲ್ಲಿ ಬಾಳೆಹೊನ್ನೂರು ಜಗದ್ಗುರುಗಳ ಧಾರ್ಮಿಕ ಸಮಾರಂಭ ಆಯೋಜಿಸಲು ಪರಮಪೂಜ್ಯರ ಅನುಮತಿ ಪಡೆಯಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಹಾಸನ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಎಚ್.ವಿ. ಹೇಮಂತ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಪುನೀತ್ ಪಟೇಲ್, ಜಿಲ್ಲಾ ನಿರ್ದೇಶಕ ಶೋಭನ್ ಬಾಬು, ತಾಲೂಕು ನಿರ್ದೇಶಕ ಡಿ.ವಿ. ಮದನ್, ಹಾಸನ ಮಹಾನಗರ ಸಮಿತಿ ಅಧ್ಯಕ್ಷ ಎಚ್. ರೋಹಿತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
