ಹಾಸನ: ಕರ್ನಾಟಕ ವಿದ್ಯಾವರ್ಧಕ ಸಂಘ (ಧಾರವಾಡ), ಹಾಸನಾಂಬ ರೂರಲ್ ಎಜುಕೇಶನ್ ಟ್ರಸ್ಟ್ ಹಾಗೂ ಹಾಸನದ ಬೆಸ್ಟ್ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಖ್ಯಾತ ಸಾಹಿತಿ ಡಾ. ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ನೆನಪಿನಲ್ಲಿ ‘ತೇಜಸ್ವಿ ಕೃತಿಗಳಲ್ಲಿ ಪರಿಸರ ಪ್ರಜ್ಞೆ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ಸೆ. 8ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಹಾಸನದ ಬೆಸ್ಟ್ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಹಾಸನ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಬಿ.ಎಸ್. ರವಿಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ನವೀನ್ ಕೆ.ಸಿ. ಅಧ್ಯಕ್ಷತೆ ವಹಿಸಲಿದ್ದಾರೆ.
ಖ್ಯಾತ ಚಿತ್ರಕಲಾವಿದ ಹಾಗೂ ಚಿತ್ರಲಾ ಫೌಂಡೇಶನ್ ಸಂಸ್ಥಾಪಕ ಬಿ.ಎಸ್. ದೇಸಾಯಿ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಸಾಹಿತಿ ಹಾಗೂ ನಿವೃತ್ತ ಆಂಗ್ಲ ಭಾಷಾ ಉಪನ್ಯಾಸಕ ಗೊರೂರು ಶಿವೇಶ್ ಅವರು ‘ತೇಜಸ್ವಿ ಕೃತಿಗಳಲ್ಲಿ ಪರಿಸರ ಪ್ರಜ್ಞೆ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಹಾಸನಾಂಬ ರೂರಲ್ ಎಜುಕೇಶನ್ ಟ್ರಸ್ಟ್ನ ಸಂಸ್ಥಾಪಕ ಹಾಗೂ ಖಜಾಂಚಿ ಈಶ್ವರಪ್ಪ ವೈ.ಹೆಚ್. ಮತ್ತು ಸಾಹಿತಿ ಗೊರೂರು ಅನಂತರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ತೇಜಸ್ವಿ ಅವರ ಸಾಹಿತ್ಯದಲ್ಲಿ ಪರಿಸರ, ಪ್ರಕೃತಿ ಮತ್ತು ಜೀವಜಗತ್ತಿನ ಕುರಿತಾದ ಚಿಂತನೆಗಳನ್ನು ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರಿಗೆ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.
