ರಾಮನಾಥಪುರ: ಚಲನಚಿತ್ರ ಹಾಗೂ ಧಾರಾವಾಹಿ ನಟ ಸ್ಕಂದ ಅಶೋಕ್ ಅವರು ಕುಟುಂಬದವರೊಂದಿಗೆ ರಾಮನಾಥಪುರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವೀರಶೈವ–ಲಿಂಗಾಯತ ಮಹಾಸಭಾದ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಾಗೀಶ್ ಪ್ರಸಾದ್ ಅವರೂ ಉಪಸ್ಥಿತರಿದ್ದರು. ದೇವಾಲಯದ ಅರ್ಚಕ ಗುಂಡಣ್ಣ ಅವರು ಸ್ಕಂದ ಅಶೋಕ್ ಹಾಗೂ ಕುಟುಂಬದವರನ್ನು ಗೌರವಿಸಿದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಜಿಲ್ಲಾಧ್ಯಕ್ಷ ಎಂ.ಎನ್. ಕುಮಾರಸ್ವಾಮಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
