ತುಮಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ)ತುಮಕೂರು ಗ್ರಾಮಾಂತರ ಕ್ಷೇತ್ರದ ಡಾ.ಡಿ.ವೀರೇಂದ್ರಹೆಗ್ಗಡೆ ಮತ್ತು ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷರಾದ ಡಾ.ಹೇಮಾವತಿ.ವಿ.ಹೆಗ್ಗಡೆ ಯವರ ಆಶೀರ್ವಾದಗಳೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಾಸನ್ ಕಣ್ಣಿನ ಆಸ್ಪತ್ರೆ ತುಮಕೂರು ರವರ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಚಿಕ್ಕತೊಟ್ಲುಕೆರೆ ವಲಯದ ಚಿಕ್ಕತೊಟ್ಲುಕೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ತಾಲೂಕಿನ ಮಾನ್ಯ ಗೌರವಾನ್ವಿತ ಯೋಜನಾಧಿಕಾರಿಗಳಾದ ಪಿ.ಬಿ.ಸಂದೇಶ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಪಿ.ಬಿ.ಸಂದೇಶ್ ರವರು ಪ್ರಾಸ್ತವಿಕವಾಗಿ ಡಾ||ಡಿ.ವೀರೇಂದ್ರಹೆಗ್ಗಡೆ ಮತ್ತು ಶ್ರೀಮತಿ ಹೇಮಾವತಿಹೆಗ್ಗಡೆರವರು ಮಾಡುತ್ತಿರುವಂತಹ ಬಹುಮುಖಿ, ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು ಹಾಗೂ ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳಲ್ಲಿ ಅತಿ ಹೆಚ್ಚಾಗಿ ಅದರಲ್ಲಿ ಪ್ರಮುಖವಾಗಿ ಕಂಡು ಬರುತ್ತಿರುವ ಸ್ತನ ಕ್ಯಾನ್ಸರ್ ಗರ್ಭಕೋಶದ ಕ್ಯಾನ್ಸರ್ ಗಳ ಬಗ್ಗೆ ತಿಳಿಸುತ್ತಾ ಮನುಷ್ಯನಿಗೆ ಕಾಯಿಲೆ ಬರುವುದು ಸಹಜ ಆದರೆ ಅದು ಬರುವ ಮುಂಚಿತವಾಗಿ ಯಾವುದೆಲ್ಲ ಪರೀಕ್ಷೆಗಳನ್ನು ಮಾಡಿಕೊಳ್ಳಬೇಕು ಅದನ್ನೆಲ್ಲ ಈ ರೀತಿ ಕ್ಯಾಂಪ್ ಗಳ ಮೂಲಕ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ರುದ್ರಮೂರ್ತಿ ರವರು ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಸಮಾಜಮುಖಿಯಾಗಿ ಮಾಡುತ್ತಿರುವ ಕೆಲಸಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು ಹಾಗೂ ಇತ್ತೀಚಿನ ದಿನಗಳಲ್ಲಿ ನೀರಿನಿಂದ ಹಾಗೂ ನಾವು ಸೇವನೆ ಮಾಡುತ್ತಿರುವ ಆಹಾರ ಪದ್ಧತಿಗಳಿಂದ ಆಗುತ್ತಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿಸಿದರು ಹಾಗೂ ವಾಸನ್ ಕಣ್ಣಿನ ಆಸ್ಪತ್ರೆಯ ಮಾರ್ಕೆಟಿಂಗ್ ಸುಪ್ರವೈಸರ್ ರವರು ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿದರು.
ಈ ಸಂದರ್ಭ ಸಿಟಿಕೆರೆ ಕಾರ್ಯಕ್ಷೇತ್ರದ ಒಕ್ಕೂಟದ ಅಧ್ಯಕ್ಷರಾದ ಜಯಮ್ಮ ರವರು ಹಾಗೂ ವಲಯದ ಮೇಲ್ವಿಚಾರಕರಾದ ವಿಜಯಕುಮಾರ್ ಮತ್ತು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶ್ರೀಮತಿನೇತ್ರ, ಸೇವಾ ಪ್ರತಿನಿಧಿ ಆಶಾ ಹಾಗೂ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.ಸಾರ್ವಜನಿಕರು ಮತ್ತು ಗ್ರಾಮಸ್ಥರು ಉಚಿತ ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಂಡರು.
- ಚಂದ್ರಚೂಡ ಕೆ.ಬಿ.
