ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಬೇಡಿಕೆಗಳನ್ನು ಈಡೆರಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದರೂ ಸರ್ಕಾರ ಸ್ಪಂದಿಸಿಲ್ಲ, ಹೀಗಾಗಿ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ತೀವ್ರ ವಿರೋಧದ ನಡುವೆಯೂ ಇತರ ಸರ್ಕಾರಿ ಇಲಾಖೆಗಳ (ಲೋಕೋಪಯೋಗಿ, ಜಲಸಂಪನ್ಮೂಲ, ಜಿಲ್ಲಾ ಪಂಚಾಯಿತಿ ಇತ್ಯಾದಿ) ಮುಖಾಂತರ ರಾಜಧನ ಕಡಿತ ಮಾಡುತ್ತಿದ್ದು, ಅದೇ ಸಮಯದಲ್ಲಿ ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರಿಂದಲೂ ಪ್ರತ್ಯೇಕವಾಗಿ ರಾಜಧನವನ್ನು ಸಂಗ್ರಹಿಸುತ್ತಿದೆ. ಒಂದೇ ವಸ್ತುವಿಗೆ ಎರಡು ಬಾರಿ ರಾಜಧನ ವಸೂಲಿ ಮಾಡುತ್ತಿರುವುದು ಯಾವನ್ಯಾಯ? ಸಂಪೂರ್ಣ ಕಾನೂನುಬಾಹಿರ ಹಾಗೂ ಅನ್ಯಾಯವಾಗಿದೆ ಎಂದು ಎಸ್.ಡಿ.ದಿಲೀಪ್ಕುಮಾರ್ ಹೇಳಿದರು.
ನಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕ್ವಾರಿ ಮತ್ತು ಕ್ರಷರ್ ಮಾಲೀಕರು ಎಲ್ಲಾ ಕ್ವಾರಿ ಮತ್ತು ಕ್ರಷರ್ ಘಟಕಗಳ ಕಾರ್ಯಾಚರಣೆ ಹಾಗೂ ಉತ್ಪಾದನೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದು.ಯಾವುದೇ ರೀತಿಯ ಜಲ್ಲಿ, ಎಂ-ಸ್ಯಾಂಡ್ ಹಾಗೂ ಕಲ್ಲು ಉತ್ಪನ್ನಗಳ ಲೋಡಿಂಗ್ ಮತ್ತು ಸಾಗಾಣಿಕೆಯನ್ನು ತಕ್ಷಣದಿಂದಲೇ ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು.ಮುಂದಿನ ಆದೇಶ ಅಥವಾ ಸರ್ಕಾರದೊಂದಿಗೆ ಮಾತುಕತೆಯ ಫಲಿತಾಂಶ ಬರುವವರೆಗೂ ಈ ಮುಷ್ಕರ ಮುಂದುವರಿಯಲಿದ್ದು, ಎಲ್ಲರೂ ಸಂಘಟನೆಯೊಂದಿಗೆ ಒಗ್ಗಟ್ಟಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು.
ಸಂಘದ ಉಪಾಧ್ಯಕ್ಷರಾದ ಬಿ.ಎಸ್.ನಾಗೇಶ್, ಶ್ರೀನಿವಾಸಮಿತ್ರ, ಕಾರ್ಯದರ್ಶಿ ಶಿವಕುಮಾರ್, ಮುಖಂಡರಾದ ರಂಗನಾಥ್ ಲಾಡ್, ಎನ್.ಎಸ್.ಬಾಲಾಜಿ, ಹನೀಫ್ ಹಾಜರಿದ್ದರು.
– ಚಂದ್ರಚೂಡ ಕೆ.ಬಿ.
