ಕೊರಟಗೆರೆ:- ತಾಲ್ಲೂಕಿನ ವೀರಶೈವ ಲಿಂಗಾಯತ ಸಮಾಜದ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ವೀರಶೈವ ಲಿಂಗಾಯತ ಸೇವಾ ಟ್ರಸ್ಟ್ (ರಿ.) ಅಸ್ತಿತ್ವಕ್ಕೆ ಬಂದಿದ್ದು, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಟ್ರಸ್ಟ್ನ ಉದ್ಘಾಟನಾ ಸಮಾರಂಭ ಜಗಜ್ಯೋತಿ ಬಸವೇಶ್ವರ ದೇವಾಲಯದಲ್ಲಿ ನಡೆಯಿತು.
ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಟ್ರಸ್ಟ್ನ ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಿದರು.
ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ತಾಲ್ಲೂಕು ಅಧ್ಯಕ್ಷ ಪಿ.ಆರ್. ಪರ್ವತಯ್ಯ ಮಾತನಾಡಿ, ಸಂಘಟನೆಯ ಮೂಲಕ ಸಮಾಜದ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಮಾಜದ ಎಲ್ಲರನ್ನು ಒಗ್ಗೂಡಿಸಿಕೊಂಡು ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟಲು ಪ್ರಾಮಾಣಿಕವಾಗಿ ಶ್ರಮಿಸುವ ಅಗತ್ಯವಿದೆ ಎಂದು ಹೇಳಿದರು.
ಸಮುದಾಯದ ಅಭಿವೃದ್ಧಿಯಲ್ಲಿ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ. ಸಮಾಜದ ಮುಖಂಡರು, ಯುವಜನರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಕಾರ ಮತ್ತು ಮಾರ್ಗದರ್ಶನದೊಂದಿಗೆ ಟ್ರಸ್ಟ್ ಮುನ್ನಡೆಯಬೇಕು. ಅಗತ್ಯವಿರುವ ಕುಟುಂಬಗಳಿಗೆ ನೆರವಾಗುವುದು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಟ್ರಸ್ಟ್ನ ಉದ್ದೇಶಗಳನ್ನು ಸಾಕಾರಗೊಳಿಸಬೇಕು ಎಂದು ಅವರು ಸಲಹೆ ನೀಡಿದರು.

ನೂತನ ಅಧ್ಯಕ್ಷ ಎಚ್.ಸಿ. ಮಂಜುನಾಥ್ ಮಾತನಾಡಿ, ವೀರಶೈವ ಲಿಂಗಾಯತ ಧರ್ಮ ಹಾಗೂ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ತಾಲ್ಲೂಕಿನ ಆರು ಹೋಬಳಿಗಳಲ್ಲಿಯೂ ವೀರಶೈವ ಲಿಂಗಾಯತ ಸೇವಾ ಟ್ರಸ್ಟ್ (ರಿ.) ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ವಿಸ್ತರಿಸಲಾಗುವುದು. ತಾಲ್ಲೂಕಿನ ಸಮಾಜದ ಏಳಿಗೆಗಾಗಿ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಸಮಾಜದ ಯುವಜನರು ಮತ್ತು ವಿದ್ಯಾರ್ಥಿಗಳನ್ನು ಸಂಘಟನೆಯೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು, ಅಗತ್ಯವಿರುವವರಿಗೆ ನೆರವು ನೀಡುವುದು ಹಾಗೂ ಸಮಾಜದ ಶೈಕ್ಷಣಿಕ ಮತ್ತು ಸಾಮಾಜಿಕ ಪ್ರಗತಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸುವುದು ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ನೂತನ ಪದಾಧಿಕಾರಿಗಳು ಟ್ರಸ್ಟ್ನ ನೂತನ ಅಧ್ಯಕ್ಷರಾಗಿ ಕೊಡ್ಲಹಳ್ಳಿ–ಹುಚ್ಚವೀರಯ್ಯನಪಾಳ್ಯದ ಎಚ್.ಸಿ. ಮಂಜುನಾಥ್ ಪದಗ್ರಹಣ ಮಾಡಿದರು. ಉಪಾಧ್ಯಕ್ಷರಾಗಿ ಕೆ.ಎನ್. ಶಿವಶಂಕರ್ ಹಾಗೂ ವಡ್ಡಗೆರೆ ಲಿಂಗರಾಜು, ಕಾರ್ಯದರ್ಶಿಗಳಾಗಿ ನಾಗರಾಜು ಕೊರಟಗೆರೆ , ಸಹ ಕಾರ್ಯದರ್ಶಿ ಬಸವರಾಜು ಮತ್ತು ಶಿವಕುಮಾರ್ ಎಂ.ಆರ್. ಖಜಾಂಚಿಯಾಗಿ ಚನ್ನನಂಜಯ್ಯ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳಾದ ಭಾನುಪ್ರಕಾಶ್ , ಮಹೇಶ್ ,ಕುಮಾರ್, ಸಂಕೇನಹಳ್ಳಿ ಮಂಜುನಾಥ್, ತೋವಿನಕೆರೆ ಮಂಜಣ್ಣ ,ಮಹೇಶ್, ನಾಗಭೂಷಣ ಸೇರಿದಂತೆ ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ವೀರಶೈವ ಲಿಂಗಾಯತ ಸೇವಾ ಟ್ರಸ್ಟ್ ಮೂಲಕ ತಾಲ್ಲೂಕಿನ ಸಮಾಜದ ವಿವಿಧ ವರ್ಗಗಳನ್ನು ಒಗ್ಗೂಡಿಸಿ, ಸಮಾಜಮುಖಿ ಸೇವಾ ಕಾರ್ಯಗಳಿಗೆ ಹೊಸ ಚೈತನ್ಯ ನೀಡುವ ಆಶಯವನ್ನು ಪದಾಧಿಕಾರಿಗಳು ವ್ಯಕ್ತಪಡಿಸಿದರು.
– ಶ್ರೀನಿವಾಸ್ ಕೊರಟಗೆರೆ.
