ಚನ್ನರಾಯಪಟ್ಟಣ: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಚನ್ನರಾಯಪಟ್ಟಣ ತಾಲೂಕು ಘಟಕದ ನೂತನ ಉಪಾಧ್ಯಕ್ಷರಾಗಿ ಡಿ.ಕೆ. ಕಿರಣ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ ಹಾಸನ ಜಿಲ್ಲಾ ಅಧ್ಯಕ್ಷ ಮನುಕುಮಾರ್ ಅವರು ಡಿ.ಕೆ. ಕಿರಣ್ ಕುಮಾರ್ ಅವರ ನೇಮಕವನ್ನು ಘೋಷಿಸಿ, ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಕರವೇ ರಾಜ್ಯ ಕಾರ್ಯದರ್ಶಿ ರಾಜೇಂದ್ರ ದೊಡ್ಡಮಗ್ಗೆ, ತಾಲೂಕು ಅಧ್ಯಕ್ಷ ಕರಡೇವು ಮಧು, ತಾಲೂಕು ಪ್ರಧಾನ ಕಾರ್ಯದರ್ಶಿ ರವಿ ಮಡಿವಾಲ್, ದಂಡಿಗನಹಳ್ಳಿ ಹೋಬಳಿ ಮುಖಂಡ ಅನಿಲ್ ಸೇರಿದಂತೆ ಕರವೇ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಚನ್ನರಾಯಪಟ್ಟಣ ತಾಲೂಕಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ.
