ಕೆ.ಆರ್.ಪೇಟೆ ತಾಲ್ಲೂಕಿನ ಕಸಬಾ ಹೋಬಳಿಯ ಅನುವಿನಕಟ್ಟೆ ಗ್ರಾಮದ ನಿವಾಸಿ ಅನ್ನದಾನಿಗೌಡ ಅವರು ಹಲವು ವರ್ಷಗಳ ಹಿಂದೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮ್ಮ ಒಂದು ಕಾಲನ್ನು ಕಳೆದುಕೊಂಡಿದ್ದರು. ಅಂದಿನಿಂದ ಕೃತಕ ಕಾಲಿನ ಸಹಾಯದಿಂದಲೇ ಜೀವನ ನಡೆಸುತ್ತಿದ್ದರು. ಆದರೆ, ಈಗಿರುವ ಕೃತಕ ಕಾಲು ಹಳೆಯದಾಗಿ ನಡೆಯಲು ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ನೂತನ ಕೃತಕ ಕಾಲು ಅಳವಡಿಸಿಕೊಳ್ಳಲು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು.
ಅನ್ನದಾನಿಗೌಡ ಮಾತನಾಡಿ ಅಪಘಾತದ ನಂತರ ಕೃತಕ ಕಾಲಿನಲ್ಲೇ ಜೀವನ ಸಾಗಿಸುತ್ತಿದ್ದೆ. ಹಳೆಯ ಕಾಲು ಹಾಳಾಗಿ ತುಂಬಾ ಕಷ್ಟ ಪಡುತ್ತಿದ್ದೆ. ನನ್ನ ಕಷ್ಟಕ್ಕೆ ಸ್ಪಂದಿಸಿ ನೂತನ ಕಾಲಿಗೆ ಸಹಾಯ ಮಾಡಿದ ಆರ್.ಟಿ.ಓ ಮಲ್ಲಿಕಾರ್ಜುನ್ ಸರ್ ಅವರಿಗೆ ನನ್ನ ಜೀವನಪೂರ್ತಿ ಚಿರಋಣಿ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ಭಾವುಕರಾಗಿ ನುಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರ್.ಟಿ.ಓ ಮಲ್ಲಿಕಾರ್ಜುನ್ ರವರು, ಸಮಾಜದಲ್ಲಿ ಅಶಕ್ತರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಿಕ್ಕೇರಿ ಗ್ರಾ.ಪಂ ಮಾಜಿ ಅಧ್ಯಕ್ಷ ರಮೇಶ್,ಮಾಜಿ ಸದಸ್ಯ ಬಾಲಕೃಷ್ಣ,ಆರ್ ಟಿ ಓ ಮಲ್ಲಿಕಾರ್ಜುನ್ ಅವರ ಆಪ್ತ ಸಹಾಯಕ ಗಂಜೀಗೆರೆ ಮಹೇಶ್ ತಾಲ್ಲೂಕು ಪತ್ರಕರ್ತ ಸಂಘದ ಉಪಾಧ್ಯಕ್ಷ ಹೊಸಹೊಳಲು ರಘು,ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ
