ಚನ್ನರಾಯಪಟ್ಟಣ: ಕರ್ನಾಟಕ ರಾಜ್ಯ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಪೂಮಡಿಹಳ್ಳಿ ಜಗದೀಶ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು, ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆಂದು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಸಿ ಎನ್ ಬಾಲಕೃಷ್ಣರವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೇಮಕ ಪ್ರಮಾಣ ಪತ್ರವನ್ನು ನೀಡಿದರು.
ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಾಲಕೃಷ್ಣರವರು ಮಾತನಾಡಿದ ನಮ್ಮ ಚನ್ನರಾಯಪಟ್ಟಣ ತಾಲೂಕಿನ ಯುವ ಸಂಘಟಕರು ಹಾಗೂ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಪೂಮಡಿಹಳ್ಳಿ ಜಗದೀಶ ರವರನ್ನು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್ ಡಿ ಕುಮಾರಸ್ವಾಮಿ ಅವರು ಗುರುತಿಸಿ, ರಾಜ್ಯ ಮಟ್ಟದ ಜೆಡಿಎಸ್ ಯುವ ಘಟಕದ ಪದಾಧಿಕಾರಿಯಾಗಿ ನೇಮಕ ಮಾಡುವ ಜೊತೆಗೆ ಯುವಕರಿಗೆ ಉನ್ನತ ಸ್ಥಾನಮಾನ ನೀಡುವ ಮೂಲಕ ಮುಂಬರುವ ದಿನಗಳಲ್ಲಿ ರಾಜ್ಯದ್ಯಂತ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಸಂಘಟಿಸುವಂತೆ ಸೂಚನೆ ನೀಡಿದ್ದಾರೆ ಎಂದರು,
ಅದೇ ರೀತಿ 2028ನೇ ವಿಧಾನಸಭಾ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ಖಂಡಿತ ಎಂದರು. ಇದಕ್ಕೆ ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಕೈಜೋಡಿಸುವ ಮೂಲಕ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕರಾದ ಸಿಎನ್ ಪುಟ್ಟಸ್ವಾಮಿಗೌಡ, ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಚಿಕ್ಕಿಬಳತಿ ಪ್ರವೀಣ್, ಜೆಡಿಎಸ್ ಮುಖಂಡರಾದ ಪರಮ ದೇವರಾಜೇಗೌಡ, ಶಿವನಂಜೇಗೌಡ, ಮೆಡಿಕಲ್ ವೆಂಕಟೇಶ್, ಅನಿಲ್, ಡಿ ಕೆ ಶ್ರೀನಿವಾಸ್, ವಡ್ಡರಹಳ್ಳಿ ಗಣೇಶ್ ಗೌಡ, ದಮ್ಮನಿಂಗಲ ಶ್ರೀನಿವಾಸ್, ಸೇರಿದಂತೆ ಇತರರು ಹಾಜರಿದ್ದರು.
– ಮಂಜುನಾಥ್ ಐ.ಕೆ
