ಹಾಸನ: ಮಕ್ಕಳ ಅಭಿವೃದ್ಧಿ ಹಾಗೂ ಮೂಲ ಶಿಕ್ಷಣ ಅಭಿವೃದ್ಧಿ ಕಾರ್ಯಕ್ರಮದಡಿ ರೋಟರಿ ಕ್ಲಬ್ ಆಫ್ ಹಾಸನ ಸನ್ ರೈಸ್ ವತಿಯಿಂದ ನಗರದ ಬಿ.ಕಾಟೀಹಳ್ಳಿ ಅಂಗನವಾಡಿ ಕೇಂದ್ರಕ್ಕೆ ಅಗತ್ಯ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು.
ಅಂಗನವಾಡಿ ಕೇಂದ್ರದ ಮುಖ್ಯ ಶಿಕ್ಷಕಿ ಗೌರಮ್ಮ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರಿ ಕ್ಲಬ್ ಆಫ್ ಹಾಸನ ಸನ್ ರೈಸ್ ಅಧ್ಯಕ್ಷ ರೋಟರಿ ಕೆ.ಎಸ್. ಯೋಗೇಶ್ ಮಾತನಾಡಿ, ಮಕ್ಕಳ ಅಭಿವೃದ್ಧಿ ಹಾಗೂ ಮೂಲ ಶಿಕ್ಷಣಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ರೋಟರಿ ಸಂಸ್ಥೆಯ ಪಾತ್ರದ ಕುರಿತು ವಿವರಿಸಿದರು.
ನಂತರ ಅಂಗನವಾಡಿ ಕೇಂದ್ರಕ್ಕೆ ಚೇರ್ಗಳು, ಕುಕ್ಕರ್ಗಳು, ತಟ್ಟೆಗಳು, ಲೋಟಗಳು, ಚಾಪೆಗಳು ಹಾಗೂ ಇತರೆ ಅಗತ್ಯ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು.

ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚು ಮಕ್ಕಳು ಹಾಗೂ ಸುಮಾರು 20 ಪೋಷಕರು ಭಾಗವಹಿಸಿದ್ದರು.
ಬಾಲ ವಿಕಾಸ ಸಮಿತಿ ಅಧ್ಯಕ್ಷೆ ತಾರ, ರೋಟರಿ ಕ್ಲಬ್ ಕಾರ್ಯದರ್ಶಿ ಬಿ.ಎಂ. ದರ್ಶನ್, ಪಾಸ್ಟ್ ಪ್ರೆಸಿಡೆಂಟ್ಗಳಾದ ವೇಣುಗೋಪಾಲ್, ಸಿದ್ದನಂಜಪ್ಪ, ವಜ್ರಕುಮಾರ್, ರೋಟರಿ ಸದಸ್ಯರಾದ ಆದರ್ಶ, ಪುಷ್ಪ, ಶೈಲಾ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಅಗತ್ಯ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ ರೋಟರಿ ಬೂದೇಶ್ ಹಾಗೂ ರೋಟರಿ ಪುಷ್ಪ ಅವರಿಗೆ ಕ್ಲಬ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಲಾಯಿತು.