ಕೊರಟಗೆರೆ:- ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ 2026-27ನೇ ಸಾಲಿಗಾಗಿ ನೀಡಲಿರುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರಕ್ಕೆ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕೊರಟಗೆರೆ ಪಟ್ಟಣದ ಸುಜ್ಞಾನ ನಿಕೇತನ ಅನುದಾನಿತ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎಂ.ರಾಜಶೇಖರ್ ಆಯ್ಕೆಯಾಗಿದ್ದಾರೆ.
ಸೆ.27 ರಂದು ವಿಜಯಪುರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
– ಶ್ರೀನಿವಾಸ್ ಕೊರಟಗೆರೆ.
