Bhagavad Gita
ಅಧ್ಯಾಯ-1
ಶ್ಲೋಕ – 34
ಆಚಾರ್ಯಾಃ ಪಿತರಃ ಪುತ್ರಾಸ್ತಥೈವ ಚ ಪಿತಾಮಹಾಃ ।
ಮಾತುಲಾಃ ಶ್ವಶುರಾಃ ಪೌತ್ರಾಃ ಸ್ಯಾಲಾಃ ಸಂಬಂಧಿನಸ್ತಥಾ ॥೩೪॥
ಮಾತುಲಾಃ ಶ್ವಶುರಾಃ ಪೌತ್ರಾಃ ಸ್ಯಾಲಾಃ ಸಂಬಂಧಿನಸ್ತಥಾ ॥೩೪॥
ಆಚಾರ್ಯಾಃ ಪಿತರಃ ಪುತ್ರಾಃ ತಥಾ ಏವ ಚ ಪಿತಾಮಹಾಃ ಮಾತುಲಾಃ ಶ್ವಶುರಾಃ ಪೌತ್ರಾಃ ಸ್ಯಾಲಾಃ ಸಂಬಂಧಿನಃ ತಥಾ-
ಗುರುಗಳು, ತಂದೆ ತಾಯಿಯಂತಿರುವವರು, ಮಕ್ಕಳು. ಅಂತೆಯೇ ಅಜ್ಜಂದಿರು, ಮಾವಂದಿರು, ಸೋದರ ಮಾವಂದಿರು, ಮೊಮ್ಮಕ್ಕಳು, ಮೈದುನಂದಿರು ಮತ್ತು ನೆಂಟರಿಷ್ಟರು.
ಅರ್ಜುನ ತನ್ನ ಬಂಧುಗಳನ್ನು, ಕುಟುಂಬದ ಸದಸ್ಯರ ಪಟ್ಟಿಯನ್ನು ಕೃಷ್ಣನ ಮುಂದೆ ಹೇಳಿಕೊಳ್ಳುತ್ತಾನೆ. ಗುರುಗಳು, ಪಿತೃಸಮಾನರು, ಮಕ್ಕಳು, ಅಜ್ಜಂದಿರು, ಮಾವಂದಿರು, ಹೆಣ್ಣು ಕೊಟ್ಟ ಮಾವಂದಿರು, ಮೊಮ್ಮಕ್ಕಳು, ಹೆಂಡತಿಯ ಅಣ್ಣ-ತಮ್ಮಂದಿರು ಮತ್ತು ನೆಂಟರಿಷ್ಟರು. ಹೀಗೆ ಕೇವಲ ತನ್ನ ಸಂಬಂಧಿಗಳ ಪಟ್ಟಿ ಕೊಡುತ್ತಿರುವ ಅರ್ಜುನ ತನ್ನ ಸಾಮಾಜಿಕ ಕರ್ತವ್ಯ ಮರೆತು ವೈಯಕ್ತಿಕವಾಗಿ ಮಾತನಾಡುತ್ತಿರುವುದು ಇಲ್ಲಿ ಸ್ಪಷ್ಟವಾಗುತ್ತದೆ.
