ಶುಭೋದಯ
ಕಾಲದ ಮರಳಿನಲ್ಲಿ ಹೆಜ್ಜೆಗುರುತುಗಳನ್ನು ಬಿಡು.
ಕಾಲನ್ನೆಳೆಯುತ್ತಾ ನಡೆಯಬೇಡ.
-ಎ.ಪಿ.ಜೆ.ಅಬ್ದುಲ್ ಕಲಾಂ.
***************************************************************************************************************
1.
ಭಾರತದ ‘ರಾ’ ನಿರ್ಬಂಧಕ್ಕೆ ಅಮೆರಿಕದ CIRF ಶಿಫಾರಸು; ವರದಿ ತಿರಸ್ಕರಿಸಿದ ಕೇಂದ್ರ
ನವದೆಹಲಿ: ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ‘ರಾ’ ವಿರುದ್ಧ ನಿರ್ಬಂಧಗಳನ್ನು ಶಿಫಾರಸು ಮಾಡಿದ ಮತ್ತು ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆಗಾಗಿ ಭಾರತವನ್ನು ‘ನಿರ್ದಿಷ್ಟ ಕಳವಳದ ದೇಶ’ ಎಂದು ಹೆಸರಿಸುವಂತೆ ಅಮೆರಿಕವನ್ನು ಒತ್ತಾಯಿಸಿದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ(ಯುಎಸ್ಸಿಐಆರ್ಎಫ್) 2025ರ ವಾರ್ಷಿಕ ವರದಿಯನ್ನು ಭಾರತ ಬುಧವಾರ ತಿರಸ್ಕರಿಸಿದೆ. ಅಮೆರಿಕದ CIRF ವರದಿಯನ್ನು “ಪಕ್ಷಪಾತಿ ಮತ್ತು ರಾಜಕೀಯ ಪ್ರೇರಿತ” ಎಂದು ಟೀಕಿಸಿದ ಭಾರತ, ಪ್ರಜಾಪ್ರಭುತ್ವ ಮತ್ತು ಸಹಿಷ್ಣುತೆಯ ಸಂಕೇತವಾಗಿರುವ ಭಾರತದ ಖ್ಯಾತಿಯನ್ನು “ಕುಗ್ಗಿಸುವ” ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಹೇಳಿದೆ. ಅಲ್ಲದೆ ಯುಎಸ್ಸಿಐಆರ್ಎಫ್ ಅನ್ನು “ಕಳವಳಕಾರಿ ಘಟಕ” ಎಂದು ಘೋಷಿಸಬೇಕು ಎಂದು ಭಾರತ ಪ್ರತಿಪಾದಿಸಿದೆ.

******************************************************************************************************************
2.ದುಬೈಯಿಂದ ಅಷ್ಟೇ ಅಲ್ಲ ಆಫ್ರಿಕಾದಿಂದಲೂ ಗೋಲ್ಡ್ ಸ್ಮಗ್ಲಿಂಗ್: DRI ತನಿಖೆಯಲ್ಲಿ ಹೊಸ ವಿಚಾರ ಬಹಿರಂಗ
ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾದಿಂದ ದುಬೈ, ಜಿನೀವಾ ಮೂಲಕ ಭಾರತಕ್ಕೆ ಚಿನ್ನ ಸಾಗಾಟ ಮಾಡಲಾಗುತ್ತಿತ್ತೆಂದು ಡಿಆರ್ಐ ತನಿಖೆಯಿಂದ ಬಹಿರಂಗಗೊಂಡಿದೆ. ತರುಣ್ ಕೊಂಡೂರು ಎಂಬ ಆರೋಪಿಯ ಹೇಳಿಕೆಯ ಪ್ರಕಾರ, ಅವರು 4-2 ಕೆಜಿ ಚಿನ್ನವನ್ನು ಸಾಗಿಸಿದ್ದರು ಎಂದು ಒಪ್ಪಿಕೊಂಡಿದ್ದಾರೆ. ಇಂದು ರನ್ಯಾ ಜೈಲಿಗಾ ಇಲ್ಲಾ ಬೇಲ್ ಹಾ ಅನ್ನೊದು ತಿಳಿಯಲಿದೆ.

***********************************************************************************************************
3.ಬಿಜೆಪಿ ಅವಧಿಯ ಕೋವಿಡ್ ಹಗರಣದ ವಿಸ್ತೃತ ಮಾಹಿತಿಗೆ ರಚನೆಯಾಗಲಿದೆ ಮತ್ತೊಂದು ಸಮಿತಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ಆರೋಪ ಕುರಿತು ಬುಧವಾರ ಸಂಪುಟ ಉಪಸಮಿತಿ ಸಭೆ ನಡೆಸಿತು. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ, ನ್ಯಾ. ಮೈಕೆಲ್ ಡಿ ಕುನ್ಹಾ ಸಲ್ಲಿಸಿದ ಮಧ್ಯಂತರ ವರದಿಯ ಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು. ಈ ವರದಿ ಪರಿಶೀಲನೆಗೆ ಮತ್ತೊಂದು ಸಮಿತಿ ರಚಿಸಲು ನಿರ್ಧರಿಸಲಾಯಿತು.

**********************************************************************************************************
4. ಕ್ರಮವಾಗಿ ಮರ ಕಡಿದರೇ ಬೀಳುತ್ತೆ ಭಾರಿ ದಂಡ! ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ
ಕರ್ನಾಟಕ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಅಕ್ರಮ ಮರ ಕಡಿಯುವಿಕೆಗೆ ವಿಧಿಸುವ ದಂಡ ಮತ್ತು ಶಿಕ್ಷೆಯನ್ನು ಹತ್ತು ಪಟ್ಟು ಹೆಚ್ಚಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಸೂಚನೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ನ ಅಭಿಪ್ರಾಯವನ್ನು ಉಲ್ಲೇಖಿಸಿ, ಅಕ್ರಮ ಮರ ಕಡಿಯುವುದು ಮಾನವ ಹತ್ಯೆಗೆ ಸಮ ಎಂದು ಸಚಿವರು ಹೇಳಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಭವಿಷ್ಯದ ಪೀಳಿಗೆಗಾಗಿ ವೃಕ್ಷಗಳನ್ನು ರಕ್ಷಿಸುವುದು ಅಗತ್ಯ ಎಂದು ಅವರು ಒತ್ತಿ ಹೇಳಿದ್ದಾರೆ.

***********************************************************************************************************
5.ಲೋಪ ತೋರಿಸಿದರೆ ಸ್ಮಾರ್ಟ್ ಮೀಟರ್ ಯೋಜನೆಗೆ ತಡೆ: ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ
ಬೆಂಗಳೂರು: ಉತ್ತರ ಪ್ರದೇಶ ಮೂಲದ ರಾಜಶ್ರೀ ಎಲೆಕ್ಟ್ರಿಕಲ್ಸ್ ರಾಜ್ಯದಲ್ಲಿ ಜಾರಿಗೆ ತರುತ್ತಿರುವ ಸ್ಮಾರ್ಟ್ ಮೀಟರ್ ಯೋಜನೆಯಲ್ಲಿ ಯಾವುದೇ ಹಗರಣ ನಡೆದಿಲ್ಲ, ಯಾವುದೇ ಅಕ್ರಮ ಮತ್ತು ಅದರ ಬಗ್ಗೆ ವಿವರಗಳನ್ನು ಸಲ್ಲಿಸಿದರೆ ಯೋಜನೆಯನ್ನು ನಿಲ್ಲಿಸಲಾಗುವುದು ಎಂದು ಸಚಿವ ಕೆ,ಜೆ,ಜಾರ್ಜ್ ಅವರು ಬುಧವಾರ ಹೇಳಿದರು. ವಿಧಾನಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕೇಂದ್ರದ ಆರ್ಡಿಎಸ್ಎಸ್ ಯೋಜನೆ ರಾಜ್ಯದಲ್ಲಿ ಅಳವಡಿಸಿಕೊಳ್ಳದ ಕಾರಣ ಬೇರೆ ರಾಜ್ಯಗಳಿಗಿಂತ ಸ್ಮಾರ್ಟ್ ಮೀಟರ್ ದರ ರಾಜ್ಯದಲ್ಲಿ ಹೆಚ್ಚಿದೆ. ವಿದ್ಯುತ್ ಸ್ಮಾರ್ಟ್ ಮೀಟರ್ ಟೆಂಡರ್ನಲ್ಲಿ ಅಕ್ರಮವಾಗಿಲ್ಲ. ಒಂದೊಮ್ಮೆ ಕೆಟಿಪಿಪಿ ನಿಯಮ ಉಲ್ಲಂಘನೆಯಾಗಿರುವುದು ಸಾಬೀತು ಮಾಡಿದರೆ ಟೆಂಡರ್ಗೆ ತಡೆ ನೀಡಿ, ತನಿಖೆಗೆ ಆದೇಶಿಸಲು ಸರ್ಕಾರಕ್ಕೆ ಆಯ್ಕೆಯಿದೆ ಎಂದು ಹೇಳಿದರು.



[…] 3. https://vicharavisthara.com/morning-quick-news-time-27-03-2025/ ಮಾರ್ನಿಂಗ್ ಕ್ವಿಕ್ ನ್ಯೂಸ್ ಟೈಮ್ […]