ತುಮಕೂರು: ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿಯ 9ನೇ ವರ್ಷದಗಣಪತಿಯ ವಿಸರ್ಜನಾ ಮಹೋತ್ಸವವನ್ನು ಈ ತಿಂಗಳ 3ರಂದು ಶನಿವಾರಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವವನ್ನು ಅಂದು ಬೆಳಿಗ್ಗೆ 11 ಗಂಟೆಗೆ ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಅಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ 20ಕ್ಕೂ ಹೆಚ್ಚು ಮಠಗಳ ಮಠಾಧೀಶರುಗಳು ಭಾಗವಹಿಸುವರು.ಇದಕ್ಕೂ ಮೊದಲು ಪೂಜ್ಯರುಗಳು ಹಿಂದೂ ಮಹಾಗಣಪತಿ ಹಾಗೂ ಮೆರವಣಿಗೆ ಗಣಪತಿಗೆ ಪೂಜೆ ಸಲ್ಲಿಸುವರು.ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮಾಜಿ ಸಚಿವರಾದ ಕೆ.ಎನ್.ರಾಜಣ್ಣ, ಬಸವನಗೌಡ ಪಾಟೀಲ್ ಯತ್ನಾಳ್, ಕೆ.ಎಸ್. ಈಶ್ವರಪ್ಪ, ಸೊಗಡು ಶಿವಣ್ಣ, ಜೆಡಿಎಸ್ ಯುವಘಟಕ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ಹಾಗೂ ಅನೇಕ ಗಣ್ಯರು, ಧಾರ್ಮಿಕ ಮುಖಂಡರು ಭಾಗವಹಿಸುವರು ಎಂದು ತಿಳಿಸಿದರು.
ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆಯು ಬಿಜಿಎಸ್ ವೃತ್ತದಿಂದ ಆರಂಭಗೊAಡು ಲಕ್ಕಪ್ಪ ವೃತ್ತ, ಜೆ.ಸಿ.ರಸ್ತೆ. ಮಂಡಿಪೇಟೆ ವೃತ್ತ, ಸ್ವತಂತ್ರಚೌಕ್, ಅಶೋಕ ರಸ್ತೆ, ಬಿ.ಜಿ.ಎಸ್ ವೃತ್ತ, ಎಂ ಜಿ ರಸ್ತೆ, ಜೈನಟೆಂಪಲ್ರಸ್ತೆ, ರಾಮಪ್ಪ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ರಸ್ತೆ, ಕೋಟೆಆಂಜನೇಯ ವೃತ್ತ, ಗಾರ್ಡನ್ ರಸ್ತೆ ಮುಖೇನ ಸಾಗಿ ಕೆ.ಎನ್.ಎಸ್. ಕಲ್ಯಾಣಿಯಲ್ಲಿ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯ ನೆರವೇರಲಿದೆ ಎಂದರು.
– ಚಂದ್ರಚೂಡ ಕೆ.ಬಿ.
