ತುಮಕೂರು: ನಗರದ ಹೊರಪೇಟೆ ಶ್ರೀ ಕರಿಬಸವಸ್ವಾಮಿ ಮಠದ ಕಾಶಿವಿಶ್ವನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಸಿದ್ದಿ ವಿನಾಯಕ ಗೆಳೆಯರ ಬಳಗದ ಗಣಪತಿ ಮೂರ್ತಿಯ ವಿಸರ್ಜನಾ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು.
ವಿಸರ್ಜನಾ ಮಹೋತ್ಸವದ ಅಂಗವಾಗಿ ವಿವಿಧ ಕಲಾ ತಂಡಗಳು ಭಾಗವಹಿಸಿ ವಿಶೇಷ ಮೆರುಗು ನೀಡಿದವು. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗಣಪತಿಗೆ ಭಕ್ತಿ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಮನುಹರಳೂರು, ಗಾಸಿಪ್ ಟೈಲರ್ಸ್ ಮಾಲೀಕ ಕುಮಾರ್ ಹಾಗೂ ಶ್ರೀ ಸಿದ್ದಿ ವಿನಾಯಕ ಗೆಳೆಯರ ಬಳಗದ ಸದಸ್ಯರು ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ
