ರಾಮನಾಥಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ನಡೆ-ನುಡಿಗಳು ಇಂದಿನ ಯುವಜನತೆಗೆ ದಾರಿದೀಪವಾಗಬೇಕು ಎಂದು ರಾಮನಾಥಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ ಹೇಳಿದರು.
ರಾಮನಾಥಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ ಜನ್ಮದಿನ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಜಯಂತಿ ಕಾರ್ಯಕ್ರಮದಲ್ಲಿ ಇಬ್ಬರು ಮಹನೀಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶ, ತತ್ವ ಹಾಗೂ ಸರಳ ಜೀವನವನ್ನು ಪ್ರತಿಯೊಬ್ಬರೂ ಸ್ಮರಿಸಿ, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರೇವಣ್ಣ ಹಾಗೂ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
