ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ವಳಂಬಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.
ಈ ಪ್ರಯುಕ್ತ ನಾಡಪ್ರಭು ಕೆಂಪೇಗೌಡರ ಸೇನೆಯ ವತಿಯಿಂದ ಶಾಲೆಯ ಎಲ್ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಅಕ್ಕಿ, ದಿನಸಿ ಪದಾರ್ಥಗಳು ಹಾಗೂ ತರಕಾರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ್, ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಾಡಪ್ರಭು ಕೆಂಪೇಗೌಡರ ಸೇನೆಯ ರಾಜ್ಯಾಧ್ಯಕ್ಷ ಮಹೇಶ್ ಕತ್ತರಿಘಟ್ಟ, ರಾಜ್ಯ ಉಪಾಧ್ಯಕ್ಷ ಎಂ.ಎನ್. ಗಣೇಶ್, ಗೌರವಾಧ್ಯಕ್ಷ ಅಂಕೇನಹಳ್ಳಿ ವಾಸು, ನೇಗಿಲಯೋಗಿ ಸಂಘದ ಅಧ್ಯಕ್ಷ ಸತೀಶ್ ಗೌಡಗೆರೆ, ವಳಂಬಿಗೆ ಗ್ರಾಮದ ನಾರಾಯಣಗೌಡ ಸೇರಿದಂತೆ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಪಾಲ್ಗೊಂಡಿದ್ದರು.

ಮಕ್ಕಳಿಗೆ ಅಗತ್ಯ ದಿನಸಿ ಹಾಗೂ ತರಕಾರಿ ವಿತರಿಸುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ನಾಡಪ್ರಭು ಕೆಂಪೇಗೌಡರ ಸೇನೆಯ ಕಾರ್ಯಕ್ಕೆ ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.
- ಮಂಜುನಾಥ್ ಐ.ಕೆ.
