ಚನ್ನರಾಯಪಟ್ಟಣ: ತಮಿಳುನಾಡಿನ ಕೋಟಗಿರಿ ಸೇಂಟ್ ಜೂಡ್ಸ್ ಪಬ್ಲಿಕ್ ಶಾಲೆಯಲ್ಲಿ ನಡೆದ ಸಿಐಎಸ್ಸಿಇ (CISCE) ರಾಷ್ಟ್ರೀಯ ಮಟ್ಟದ ವಾಲಿಬಾಲ್ ಚಾಂಪಿಯನ್ಶಿಪ್ನಲ್ಲಿ ಚನ್ನರಾಯಪಟ್ಟಣದ ಶ್ರೀ ವಿವೇಕಾನಂದ ಅಂತರರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಿ.ಆರ್. ಚಂದನ್ ಹಾಗೂ ಕೆ.ಆರ್. ಹರ್ಷಿತ್ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ತೃತೀಯ ಸ್ಥಾನ ಗಳಿಸುವ ಮೂಲಕ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶ್ರೀ ವಿವೇಕಾನಂದ ಅಂತರರಾಷ್ಟ್ರೀಯ ಶಾಲೆಯ ಅಧ್ಯಕ್ಷ ದಿನೇಶ್, ಕಾರ್ಯದರ್ಶಿ ಗೀತಾ ದಿನೇಶ್ ಹಾಗೂ ಪ್ರಾಂಶುಪಾಲ ಮಹದೇವ ಈ. ಅಭಿನಂದನೆ ಸಲ್ಲಿಸಿ, ಮುಂದಿನ ಕ್ರೀಡಾ ಚಟುವಟಿಕೆಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.
- ಮಂಜುನಾಥ್ ಐ.ಕೆ.
