ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿಯ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಅಭಿವೃದ್ಧಿಗಾಗಿ ಗುರುತಿಸಲಾಗಿರುವ ಜಮೀನಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಅನಂತರಾಮು ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ವಡ್ಡಗೆರೆ ಗ್ರಾಮದ ಸರ್ವೆ ನಂ. 106ರ ಜಮೀನಿನಲ್ಲಿ ನಿವೇಶನ ಅಭಿವೃದ್ಧಿಗಾಗಿ ಗುರುತಿಸಲಾಗಿರುವ ಸ್ಥಳವನ್ನು ಪರಿಶೀಲಿಸಿದ ಅವರು, ಜಮೀನಿನ ಲಭ್ಯ ವಿಸ್ತೀರ್ಣ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಅಂಶಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಿವೇಶನ ಅಭಿವೃದ್ಧಿಗೆ ಕೈಗೊಳ್ಳಬೇಕಿರುವ ಮುಂದಿನ ಕ್ರಮಗಳ ಕುರಿತು ಸ್ಥಳದಲ್ಲಿಯೇ ಪರಿಶೀಲನೆ ನಡೆಸಿದ ಅವರು, ಸಂಬಂಧಿಸಿದ ದಾಖಲೆಗಳು ಹಾಗೂ ಜಮೀನಿನ ವಾಸ್ತವ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ವಡ್ಡಗೆರೆ ಗ್ರಾಮ ಪಂಚಾಯಿತಿ ಪಿಡಿಒ ರಘುನಂದನ್ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
– ಶ್ರೀನಿವಾಸ್ ಕೊರಟಗೆರೆ.
