ತುಮಕೂರು: ರಾಜ್ಯ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಉದ್ದೇಶಿಸಿರುವ ಕೆ.ಜಿ. ರಂಗಸ್ವಾಮಿ (ರಂಗಸ್ವಾಮಿಗೌಡ) ಅವರು ಇಂದು ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ಸಹಾಯಕ ಚುನಾವಣಾಧಿಕಾರಿ ಜಿ. ಪ್ರಭು ಅವರಿಗೆ ನಾಮಪತ್ರ ಸಲ್ಲಿಸಿದರು.
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಕ್ಟೋಬರ್ 6 ಕೊನೆಯ ದಿನವಾಗಿದ್ದು, ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 23ರಂದು ಮತದಾನ ಹಾಗೂ ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದೆ.
- ಚಂದ್ರಚೂಡ ಕೆ.ಬಿ.
