ರಾಮನಾಥಪುರ: ಹಾಸನ ಜಿಲ್ಲಾ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷರಾದ ಶರಣ ಪುನೀತ್ ಪಟೇಲ್ ಅವರು ರಾಮನಾಥಪುರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಭಕ್ತ ಬಳಗದ ಅಧ್ಯಕ್ಷರಾದ ಎಂ.ಎನ್. ಕುಮಾರಸ್ವಾಮಿ ಅವರು ಶರಣ ಪುನೀತ್ ಪಟೇಲ್ ಅವರನ್ನು ಗೌರವಿಸಿ, ಶುಭಹಾರೈಸಿದರು.
ಈ ವೇಳೆ ಹಾಸನ ತಾಲೂಕು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಅಧ್ಯಕ್ಷರಾದ ಕಟ್ಟಾಯ ಶಿವಕುಮಾರ್ ಸೇರಿದಂತೆ ಮುಖಂಡರು ಹಾಗೂ ಭಕ್ತರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
