ತುಮಕೂರು: ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಂ. ಸುರೇಶ್ ಅವರ ಪರವಾಗಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಹಾಗೂ ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಜಿಲ್ಲಾ ವಕೀಲರ ಸಂಘಕ್ಕೆ ಭೇಟಿ ನೀಡಿ ವಕೀಲರಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್. ಕೆಂಪರಾಜಯ್ಯ, ಪ್ರಧಾನ ಕಾರ್ಯದರ್ಶಿ ಹಿರೇಹಳ್ಳಿ ಮಹೇಶ್, ಖಜಾಂಚಿ ಸಿಂಧು, ಡಿ.ಸಿ. ಹಿಮಾನಂದ್, ಅಭ್ಯರ್ಥಿ ಕೆ.ಎಂ. ಸುರೇಶ್, ಹಿರಿಯ ವಕೀಲರಾದ ಎಂ.ಸಿ. ಚಂದ್ರಯ್ಯ, ಕುಮಾರಸ್ವಾಮಿ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
– ಚಂದ್ರಚೂಡ ಕೆ.ಬಿ.
