ಚನ್ನರಾಯಪಟ್ಟಣ: ಮೈಸೂರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆಯಲ್ಲಿ ಮೈಸೂರಿನ ಯುವರಾಜ ಕಾಲೇಜಿನ ಅಂತಿಮ ವರ್ಷದ ಬಿಎಸ್ಸಿ ವಿದ್ಯಾರ್ಥಿ ಸಿ.ಎ. ಸೃಜನ್ ಅತ್ಯುತ್ತಮ ಪ್ರದರ್ಶನ ನೀಡಿ ಟ್ರೋಫಿ ಹಾಗೂ ನಗದು ಬಹುಮಾನ ಪಡೆದುಕೊಂಡಿದ್ದಾರೆ.
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಮೈಸೂರು ಹಾಗೂ ಮಹಾರಾಣಿ ಮಹಿಳಾ ಕಾಲೇಜು, ಜೆಎಲ್ಬಿ ರಸ್ತೆ, ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಈ ಮ್ಯಾರಥಾನ್ ಸ್ಪರ್ಧೆ ಆಯೋಜಿಸಲಾಗಿತ್ತು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸಿ.ಎ. ಸೃಜನ್ ಅವರು ಮ್ಯಾರಥಾನ್ ಓಟವನ್ನು ಕೇವಲ 12 ನಿಮಿಷ 39 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿ ಗಮನಾರ್ಹ ಸಾಧನೆ ಮಾಡಿದರು. ಅವರ ಈ ಸಾಧನೆಗೆ ಟ್ರೋಫಿ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.
– ಮಂಜುನಾಥ್ ಐ. ಕೆ.
