ಶ್ಲೋಕ – 27
ಯಜ್ಞೇ ತಪಸಿ ದಾನೇ ಚ ಸ್ಥಿತಿಃ ಸದಿತಿ ಚೋಚ್ಯತೇ ।
ಕರ್ಮ ಚೈವ ತದರ್ಥೀಯಂ ಸದಿತ್ಯೇವಾಭಿಧೀಯತೇ ॥೨೭॥
ಯಜ್ಞೇ ತಪಸಿ ದಾನೇ ಚ ಸ್ಥಿತಿಃ ಸತ್ ಇತಿ ಚ ಉಚ್ಯತೇ ।
ಕರ್ಮ ಚ ಏವ ತತ್ ಅರ್ಥೀಯಂ ಸತ್ ಇತಿ ಏವ ಅಭಿಧೀಯತೇ – ಯಜ್ಞ-ದಾನ-ತಪಸ್ಸುಗಳಲ್ಲಿ ನಿಷ್ಠೆಯನ್ನೂ ‘ಸತ್’ ಎನ್ನುತ್ತಾರೆ. ಭಗವಂತನಿಗಾಗಿ ಆಚರಿಸುವ ಕರ್ಮವನ್ನೂ ‘ಸತ್’ ಎಂದೇ ಕರೆಯುತ್ತಾರೆ.
‘ಸತ್’ ಎಂದರೆ ‘ಸತ್’ ಶಬ್ದ ವಾಚ್ಯನಾದ ಭಗವಂತನನ್ನು ಯಜ್ಞ, ದಾನ, ತಪಸ್ಸಿನಿಂದ ಆರಾಧಿಸುವುದು. ಹೀಗಾಗಿ ಭಗವಂತನೂ ‘ಸತ್’;
ಅವನ ಕುರಿತಾದ ಕರ್ಮವೂ ‘ಸತ್’(ಸತ್ಕರ್ಮ); ಅವನ ಕುರಿತಾಗಿ ಕರ್ಮ ಮಾಡುವವನೂ ‘ಸತ್’(ಸಜ್ಜನ).
ನಾವು ಭಗವಂತನ ಎಚ್ಚರದಿಂದ, ಫಲಾಪೇಕ್ಷೆ ಇಲ್ಲದೆ, ಭಗವದರ್ಪಣಾ ಭಾವದಿಂದ, ಭಗವಂತ ಪ್ರೀತನಾಗಲಿ ಎಂದು ಮಾಡುವ ಸಮಸ್ತ ಕರ್ಮವೂ ಸತ್-ಕರ್ಮ.
