ಹಾಸನ: ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಹಾಸನ ಜಿಲ್ಲಾ ವೀರಶೈವ ಲಿಂಗಾಯತ ಸಂಘದ ವತಿಯಿಂದ ಡಿಸೆಂಬರ್ 2ರಂದು ಹಾಸನದಲ್ಲಿ ಬಾಳೆಹೊನ್ನೂರಿನ ಜಗದ್ಗುರು ಶ್ರೀ ರಂಭಾಪುರಿ ಸ್ವಾಮೀಜಿ ಅವರ ಧಾರ್ಮಿಕ ಜಾಗೃತಿ ಸಮ್ಮೇಳನವನ್ನು ಅದ್ದೂರಿಯಾಗಿ ಆಯೋಜಿಸಲು ನಿರ್ಧರಿಸಲಾಗಿದೆ.

ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಅಕ್ಟೋಬರ್ 13ರಂದು ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳು ಹಾಗೂ ಸಿದ್ಧತೆಗಳ ಕುರಿತು ಚರ್ಚಿಸಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಸುಮಾರು ಐದು ಸಾವಿರ ಜನರನ್ನು ಸೇರಿಸಿ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆ, ಭಕ್ತರ ಭಾಗವಹಿಸುವಿಕೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಮ್ಮೇಳನದ ಸಿದ್ಧತೆಗಳ ಕುರಿತು ಮತ್ತಷ್ಟು ಚರ್ಚಿಸಿ ಮುಂದಿನ ಕಾರ್ಯಯೋಜನೆ ರೂಪಿಸಲು ಅಕ್ಟೋಬರ್ 24ರಂದು ಮತ್ತೊಂದು ಪೂರ್ವಭಾವಿ ಸಭೆ ನಡೆಸಲು ನಿರ್ಧರಿಸಲಾಯಿತು.

ಶ್ರೀ ರಂಭಾಪುರಿ ಜಗದ್ಗುರುಗಳ ಧಾರ್ಮಿಕ ಸಂದೇಶ ಹಾಗೂ ಜಾಗೃತಿಯ ಆಶಯವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸಮ್ಮೇಳನವನ್ನು ಯಶಸ್ವಿಗೊಳಿಸಲು ಎರಡೂ ಸಂಘಟನೆಗಳು ಸಿದ್ಧತೆ ಕೈಗೊಳ್ಳುತ್ತಿವೆ.
– ಶಿವಕುಮಾರ್ ಕಟ್ಟಾಯ
