ಶ್ಲೋಕ – 28
ಅಶ್ರದ್ಧಯಾ ಹುತಂ ದತ್ತಂ ತಪಸ್ತಪ್ತಂ ಕೃತಂ ಚ ಯತ್ ।
ಅಸದಿತ್ಯುಚ್ಯತೇ ಪಾರ್ಥ ನ ಚ ತತ್ ಪ್ರೇತ್ಯ ನೋ ಇಹ ॥೨೮॥
ಅಶ್ರದ್ಧಯಾ ಹುತಮ್ ದತ್ತಮ್ ತಪಃ ತಪ್ತಮ್ ಕೃತಂ ಚ ಯತ್ ।
ಅಸತ್ ಇತಿ ಉಚ್ಯತೇ ಪಾರ್ಥ ನ ಚ ತತ್ ಪ್ರೇತ್ಯ ನೋ ಇಹ – ಮಾಡುವ ಕರ್ಮದಲ್ಲಿ ಶ್ರದ್ದೆ ಇಲ್ಲದೆ, ಭಗವಂತನಲ್ಲಿ ಶ್ರದ್ದೆ ಇಲ್ಲದೆ, ಯಾರದ್ದೋ ಒತ್ತಾಯಕ್ಕಾಗಿ, ಅಥವಾ ಭಯದಿಂದ, ಪೂರ್ಣ ನಂಬಿಕೆ ಇಲ್ಲದೆ ಮಾಡುವ ಕ್ರಿಯೆ ವ್ಯರ್ಥ. ಶ್ರದ್ದೆ ಇಲ್ಲದೆ ಮಾಡುವ ಇಂಥಹ ದಾನ, ತಪಸ್ಸು, ಯಜ್ಞ, ಅಥವಾ ಇತರ ಯಾವುದೇ ಕರ್ಮಕ್ಕೆ ಇಹದಲ್ಲೂ ಫಲವಿಲ್ಲ, ಪರದಲ್ಲೂ ಫಲವಿಲ್ಲ.
ಇತಿ ಸಪ್ತದಶೋSಧ್ಯಾಯಃ
ಹದಿನೇಳನೆಯ ಅಧ್ಯಾಯ ಮುಗಿಯಿತು
