ಹಾಸನ: ನವೆಂಬರ್ 24ರಂದು ಹಾಸನದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ತಾರನಾಥ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಪುನೀತ್ ಪಟೇಲ್, ಸೀಗೆ ನಂಜುಂಡಪ್ಪ, ಕಟ್ಟಾಯ ಶಿವಕುಮಾರ್, ಎಚ್.ವಿ. ಹೇಮಂತ್ ಕುಮಾರ್, ಯು.ಎಸ್. ಬಸವರಾಜ್, ನಾಗೇಶ್, ವಿಶ್ವನಾಥ್ ಸೇರಿದಂತೆ ಸಮಾಜದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕಿತ್ತೂರು ರಾಣಿ ಚನ್ನಮ್ಮ ಅವರ ಧೈರ್ಯ, ಸಾಹಸ, ದೇಶಪ್ರೇಮ ಹಾಗೂ ಬ್ರಿಟಿಷರ ವಿರುದ್ಧದ ಹೋರಾಟವನ್ನು ಸ್ಮರಿಸಿ, ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
– ಶಿವಕುಮಾರ್ ಕಟ್ಟಾಯ
