ಕೊರಟಗೆರೆ: ತಾಲ್ಲೂಕಿನ ಬಿಳೇಕಲ್ಲಹಳ್ಳಿ ಗ್ರಾಮದ ರೈತ ಕುಟುಂಬದ ವಿದ್ಯಾರ್ಥಿ ಹರ್ಷಾನಂದ ಬಿ.ಜಿ. ಅವರು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಚೆಸ್ ಚಾಂಪಿಯನ್ಶಿಪ್ನ ದಕ್ಷಿಣ ವಲಯದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗ್ರಾಮೀಣ ಪ್ರತಿಭೆಯಾಗಿ ಗಮನ ಸೆಳೆದಿದ್ದಾರೆ.
ಬಿಳೇಕಲ್ಲಹಳ್ಳಿ ಗ್ರಾಮದ ರೈತ ಗೊ. ಮುನಿಯಪ್ಪ ಅವರ ಪುತ್ರ ಹರ್ಷಾನಂದ ಅವರು ತುಮಕೂರು ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಬಿ.ಕಾಂ. ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಕೃಷಿ ಮತ್ತು ಹೈನುಗಾರಿಕೆಯನ್ನು ಅವಲಂಬಿಸಿರುವ ಸಾಮಾನ್ಯ ರೈತ ಕುಟುಂಬದಿಂದ ಬಂದಿರುವ ಅವರು, ವಿದ್ಯಾಭ್ಯಾಸದ ಜತೆಗೆ ಚೆಸ್ ಕ್ರೀಡೆಯಲ್ಲಿಯೂ ತಮ್ಮ ಪ್ರತಿಭೆ ಮತ್ತು ಪರಿಶ್ರಮದ ಮೂಲಕ ಸಾಧನೆ ಮಾಡಿದ್ದಾರೆ.

ಆಂಧ್ರಪ್ರದೇಶದ ಸುರಂಪಾಲಂನ ಆದಿತ್ಯ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 2ರಿಂದ 5ರವರೆಗೆ ನಡೆಯಲಿರುವ ದಕ್ಷಿಣ ವಲಯದ ಅಂತರ ವಿಶ್ವವಿದ್ಯಾಲಯ ಚೆಸ್ ಚಾಂಪಿಯನ್ಶಿಪ್ನಲ್ಲಿ ಹರ್ಷಾನಂದ ಅವರು ತುಮಕೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ.
ಸಾಮಾನ್ಯ ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಹರ್ಷಾನಂದ ಅವರು ತಮ್ಮ ಪರಿಶ್ರಮ ಮತ್ತು ಕ್ರೀಡೆಯ ಮೇಲಿನ ಆಸಕ್ತಿಯಿಂದ ಈ ಸಾಧನೆ ಮಾಡಿರುವುದು ಕುಟುಂಬದವರು ಹಾಗೂ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಈ ಸಾಧನೆಗೆ ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂಬರುವ ಚಾಂಪಿಯನ್ಶಿಪ್ನಲ್ಲಿ ಉತ್ತಮ ಪ್ರದರ್ಶನ ನೀಡಿ ವಿಶ್ವವಿದ್ಯಾಲಯಕ್ಕೆ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ.
ವರದಿ : ಶ್ರೀನಿವಾಸ್,ಕೊರಟಗೆರೆ
