ಕೆ.ಆರ್.ಪೇಟೆ: ಪಟ್ಟಣದ ನಳಂದ ಕಾನ್ವೆಂಟ್ ಪಕ್ಕದ ಬನ್ನಿಮಂಟಪದ ಬಳಿ ವಿಜಯದಶಮಿ ಪ್ರಯುಕ್ತ ಆಯೋಜಿಸಲಾಗಿದ್ದ ವಿಶೇಷ ಪೂಜಾ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.
ಕೆ.ಆರ್.ಪೇಟೆ ತಾಲ್ಲೂಕು ಹೊಸಹೊಳಲು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವರ ಬನ್ನಿಮಂಟಪೋತ್ಸವದ ಅಂಗವಾಗಿ ನಡೆದ ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಸಂಸ್ಕಾರ ಬಂಡಾರ ಅಪರೂಪದ ಜ್ಞಾನ ಜ್ಯೋತಿ ಸಂಸ್ಕೃತಿಯ ರಾಯಭಾರಿ ಸಮಾಜ ಸೇವಾ ಸರದಾರರಾದ ಆರ್.ಟಿ.ಓ ಮಲ್ಲಿಕಾರ್ಜುನ್ ರವರು ಸೇರಿದಂತೆ ಜಯನಗರ ನಿವಾಸಿಗಳು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಭಗವಂತನ ದಿವ್ಯ ದರ್ಶನ ಪಡೆದರು.
ವಿಜಯದಶಮಿಯ ಶುಭ ಸಂದರ್ಭದಲ್ಲಿ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ, ರೈತರ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಅರ್ಚಕರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದು, ಆರ್ ಟಿ ಓ ಮಲ್ಲಿಕಾರ್ಜುನ್ ರವರನ್ನು ಆತ್ಮೀಯವಾಗಿ ಗೌರವಿಸಿದರು.

ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಮಾತನಾಡಿ ವಿಜಯದಶಮಿ ಎಂಬುದು ಅಸತ್ಯದ ವಿರುದ್ಧ ಸತ್ಯದ ಗೆಲುವಿನ ಸಂಕೇತ ನಮ್ಮ ಪೂರ್ವಜರು ಬನ್ನಿ ಮರಕ್ಕೆ ಪೂಜೆ ಸಲ್ಲಿಸುತ್ತಾ ಬಂದಿರುವುದು ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಹೊಸಹೊಳಲು ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವರ ಬನ್ನಿಮಂಟಪೋತ್ಸವದಂತಹ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಮಾಡುತ್ತವೆ. ಇಂತಹ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದತೆ, ಭಾತೃತ್ವ ಬೆಳೆಯಬೇಕು. ನಾಡಿನ ರೈತರ ಏಳಿಗೆಗಾಗಿ, ಸಮಸ್ತ ಜನರ ಒಳಿತಿಗಾಗಿ ನಾವೆಲ್ಲರೂ ಒಗ್ಗೂಡಿ ಪ್ರಾರ್ಥಿಸೋಣ ಎಂದ ಅವರು ನಮ್ಮ ಹೊಸಹೊಳಲು ದೇವಾಲಯ ಇತಿಹಾಸ ಪ್ರಸಿದ್ಧ ದೇವಾಲಯ. ಇದರ ಅಭಿವೃದ್ಧಿಗೆ ನಾವೆಲ್ಲರೂ ಕೈಜೋಡಿಸಬೇಕು. ಸಂಸ್ಕಾರ ಬಂಡಾರದಂತಹ ದೇವಾಲಯಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮಚಂದ್ರ, ರಘುನಾಥ್, ಉದಯ್ ಕುಮಾರ್, ವರದರಾಜು, ಐ.ಸಿ.ಎಲ್ ಮಂಜು, ಶಿಕ್ಷಕರಾದ ಶ್ರೀಧರ್, ಆರ್.ಕೆ ರಮೇಶ್, ಡಿ.ಸಿ.ಸಿ ಬ್ಯಾಂಕ್ ಮೇಲ್ವಿಚಾರಕ ರಘು, ಪುರಸಭೆ ಮಾಜಿ ಸದಸ್ಯ ಕೋಳಿ ನಾಗಣ್ಣ, ಚಾ.ಸಿ ಶಿವಕುಮಾರ್, ಸಾಹಿತಿ ಮಾರೆನಹಳ್ಳಿ ಲೋಕೇಶ್, ಆರ್.ಟಿ.ಓ ಮಲ್ಲಿಕಾರ್ಜುನ್ ಆಪ್ತ ಸಹಾಯಕ ಗಂಜೀಗೆರೆ ಮಹೇಶ್, ಸುನಿಲ್, ಬಾಲಕೃಷ್ಣ,ಸೇರಿದಂತೆ ನೂರಾರು ಭಕ್ತರು ಇದ್ದರು.
*ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ*
