ಆಲೂರು: ಆಲೂರು ತಾಲ್ಲೂಕಿನ ನಾಲ್ಕನೇ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ. ಸುಜಲಾದೇವಿ ಅವರನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಆಲೂರು ತಾಲ್ಲೂಕು ಘಟಕದ ಪದಾಧಿಕಾರಿಗಳು ಕುಂದೂರು ಗ್ರಾಮದ ಅವರ ಸ್ವಗೃಹದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಗೌರವ ತರುವ ನಿಟ್ಟಿನಲ್ಲಿ ನಡೆಯಲಿರುವ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಸುಜಲಾದೇವಿ ಅವರಿಗೆ ಶುಭಾಶಯಗಳನ್ನು ತಿಳಿಸಿದ ಪದಾಧಿಕಾರಿಗಳು, ಅವರ ಸಾಹಿತ್ಯ ಸೇವೆಯನ್ನು ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್, ತಾಲ್ಲೂಕು ಅಧ್ಯಕ್ಷ ಮಣಿಪುರ ಕೃಷ್ಣೇಗೌಡ, ತಾಲ್ಲೂಕು ಗೌರವಾಧ್ಯಕ್ಷ ಎಂ. ಬಾಲಕೃಷ್ಣ, ಆಲೂರು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಿ.ಎಂ. ವರದರಾಜು, ತಾಲ್ಲೂಕು ಕಾರ್ಯದರ್ಶಿ ಧರ್ಮ ಕೆರಲೂರು, ಮಹಿಳಾ ಕಾರ್ಯದರ್ಶಿ ಚಂದ್ರಕಲಾ ಎಂ. ಆಲೂರು, ತಾಲ್ಲೂಕು ಖಜಾಂಚಿ ಡಿ.ಸಿ. ಬಸವರಾಜ್, ಸಾಹಿತ್ಯ ಪೋಷಕ ಧರ್ಮ ತಾಳೂರು, ಜಯ ಪದ್ಮರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
