ಕೆ.ಆರ್.ಪೇಟೆ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅ.31 ರಂದು ಮಂಡ್ಯನಗರಕ್ಕೆ ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ನೂರಾರು ಮಂದಿಗೆ ಸರ್ಕಾರದ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ ಎಂದು ಕ್ಷೇತ್ರದ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಅವರು ತಿಳಿಸಿದರು.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಅವರ ಕಾರ್ಯಕ್ರಮಕ್ಕೆ ಜನರನ್ನು ಕರೆದೊಯ್ಯಲು ತಾಲೂಕಿಗೆ 75ರಿಂದ 100 ಬಸ್ಗಳನ್ನು ಕಳುಹಿಸಲಾಗುತ್ತದೆ. ಪ್ರತಿ ಗ್ರಾಮ ಪಂಚಾಯಿತಿಗೆ ಎರಡರಿಂದ ಮೂರು ಬಸ್ಗಳು ಬರಲಿವೆ. ಮಹಿಳಾ ಸ್ವ ಸಹಾಯಕ ಸಂಘ, ಎನ್ಆರ್ಎಲ್ಎಂ ಮತ್ತು ಸಹಕಾರ ಸಂಘಗಳ ಸದಸ್ಯರು ಕಾರ್ಯಕ್ರಮಕ್ಕೆ ತೆರಳಲಿದ್ದಾರೆ.

ಮಂಡ್ಯದ ಸರ್ಕಾರಿ ಬಾಲಕರ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಂದ ಸವಲತ್ತುಗಳನ್ನು ವಿತರಿಸಲಾಗುತ್ತದೆ. ಫಲಾನುಭವಿಗಳನ್ನು ಬಸ್ಗಳಲ್ಲಿ ಕರೆದೊಯ್ದು ಮತ್ತೆ ತಂದು ಬಿಡುವ ಜವಾಬ್ದಾರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜವಾಬ್ದಾರಿ ಯಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು. ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಗ್ಯಾರಂಟಿ ಯೋಜನೆಗಳ ಎಲ್ಲಾ ಫಲಾನುಭವಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಪೂರ್ವಭಾವಿ ಸಭೆಯಲ್ಲಿ
ಮಾಜಿ ಶಾಸಕ ಬಿ.ಪ್ರಕಾಶ್, ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಬಿ.ಎಲ್.ದೇವರಾಜು, ಕೆಯುಐಡಿಎಫ್ ಸಿ ನಿಗಮದ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಅಂಬರೀಶ್, ಮನ್ ಮುಲ್ ನಿರ್ದೇಶಕ ಎಂ.ಬಿ.ಹರೀಶ್, ಜಿ.ಪಂ.ಮಾಜಿ ಸದಸ್ಯರಾದ ಕೊಡಗಹಳ್ಳಿ ದೇವರಾಜು, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಪ.ಜಾ, ಪ.ಪಂ. ವಿಭಾಗದ ಅಧ್ಯಕ್ಷರಾದ ರಾಜಯ್ಯ, ಶಿವಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲೋಲಾಕ್ಷಿ ಜಗದೀಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಟಿ.ಎನ್.ದಿವಾಕರ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್, ವಕೀಲ ಚಟ್ಟಂಗೆರೆ ನಾಗೇಶ್, ಹೆತ್ತಗೋನಹಳ್ಳಿ ನಾರಾಯಣಗೌಡ, ಡಾ.ಕೆ.ಸಿ.ಶ್ರೀಕಾಂತ್, ಟಿ.ಎನ್.ರಾಜೇಶ್, ಕೆ.ಆರ್.ರವೀಂದ್ರಬಾಬು, ಕೆ.ಕೆ.ರಮೇಶ್, ಆಯಾಜ್, ನವೀದ್ ಅಹಮದ್, ಹಾಫೀಜುಲ್ಲಾ ಷರೀಫ್,(ಸಲ್ಲು), ಸಯ್ಯದ್ ಜಮೀಲ್, ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯರಾದ ಶಿವಮ್ಮ, ಶಿವಣ್ಣ, ಲತಾ, ಸಿ.ಆರ್.ಪಿ.ಕುಮಾರ್, ಆಕಾಶ್, ಇಲ್ಯಾಸ್ ಅಹಮದ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
