ಕೊರಟಗೆರೆ: ವಿಶ್ವ ಪೋಲಿಯೋ ದಿನದ ಅಂಗವಾಗಿ ರೋಟರಿ ಕ್ಲಬ್ ಕೊರಟಗೆರೆ ಹಾಗೂ ತಾಲ್ಲೂಕು ಆಡಳಿತ, ಪಂಚಾಯಿತಿ, ತಾಲ್ಲೂಕು ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪುರಸಭೆಯ ಸಂಯುಕ್ತಾಶ್ರಯದಲ್ಲಿ 2026ರ ಅಕ್ಟೋಬರ್ 24ರ ಶನಿವಾರದಂದು ವಿಶ್ವ ಪೋಲಿಯೋ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಕೊರಟಗೆರೆಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ತಾಲ್ಲೂಕು ಆಸ್ಪತ್ರೆಯವರೆಗೆ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು. ಜಾಥಾದ ಮೂಲಕ ಸಾರ್ವಜನಿಕರಲ್ಲಿ ಪೋಲಿಯೋ ಲಸಿಕೆಯ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಕ್ಲಬ್ ಕೊರಟಗೆರೆಯ ಅಧ್ಯಕ್ಷರಾದ ರೋಟೇರಿಯನ್ ಡಾ. ನರಸಿಂಹಮೂರ್ತಿ ವಿ.ಕೆ. ಅವರು, ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
“ಎರಡು ಹನಿ ಜೀವದ ಅಮೃತ” ಎಂಬ ಸಂದೇಶದೊಂದಿಗೆ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಮಹತ್ವವನ್ನು ಅವರು ಒತ್ತಿಹೇಳಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆಸ್ಪತ್ರೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಶ್ರೀಮತಿ ಜೋಶ್ನಾ ರೆಡ್ಡಿ, ವೈದ್ಯರಾದ ಡಾ. ರವಿಕುಮಾರ್, ರೋಟರಿ ಕ್ಲಬ್ ಕಾರ್ಯದರ್ಶಿ ಹೊನ್ನೇಶ್ ಪಿ.ಕೆ., ಖಜಾಂಚಿ ನಾರಾಯಣಸ್ವಾಮಿ ಎನ್., ಸದಸ್ಯರಾದ ಸುರೇಶ್ ಎನ್.ಯು., ಶಂಕರ್ ಡಿ., ನಾಗೇಂದ್ರ ಎಚ್.ಎನ್., ಪ್ರಸನ್ನ ಕುಮಾರ್ ಎಸ್. ಹಾಗೂ ಮಂಜುನಾಥ್ ಎ.ಜಿ. ಉಪಸ್ಥಿತರಿದ್ದರು.
ಇದಲ್ಲದೆ, ತಾಲ್ಲೂಕಿನ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ನರಸಿಂಹಯ್ಯ ಹೊಸಕೋಟೆ
