ಕೊರಟಗೆರೆ:– ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ವಿಜ್ಞಾನ ವಿಷಯದ ಅತಿಥಿ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜ್ಞಾನ ವಿಷಯದ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು B.Sc, B.Ed,(CBZ) ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ: ನಿಗದಿತ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ (ರೆಸ್ಯೂಮ್)ವನ್ನು 9164997010 ಮೊಬೈಲ್ ಸಂಖ್ಯೆಗೆ ಕಳುಹಿಸಬಹುದು.
ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಗಾಗಿ ಬೈಚಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಸಂಪರ್ಕಿಸುವಂತೆ ಪ್ರಾಂಶುಪಾಲರು ಕೋರಿದ್ದಾರೆ.
– ಶ್ರೀನಿವಾಸ್ ಕೊರಟಗೆರೆ.
